ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ(92) ಅವರು ಹೃದಯಾಘಾತದಿಂದ ಮುಂಬೈನಲ್ಲಿ ವಿಧಿವಶರಾಗಿದ್ದಾರೆ.
ಶನಿವಾರ ಹೃದಯಾಘಾತಕ್ಕೊಳಗಾದ ಅವರನ್ನು ತಕ್ಷಣ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಾಣದೆ ಅವರು ಕೊನೆಯುಸಿರೆಳೆದಿದ್ದಾರೆ.
ಭಾರತೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ಆಶಾ ಭೋಸ್ಲೆ ಅವರು ಅನೇಕ ದಶಕಗಳ ಕಾಲ ಸಾವಿರಾರು ಹಾಡುಗಳ ಮೂಲಕ ಅಭಿಮಾನಿಗಳ ಮನಗೆದ್ದಿದ್ದರು. ಅವರ ನಿಧನವು ಸಂಗೀತ ಲೋಕಕ್ಕೆ ಅಪಾರ ನಷ್ಟವಾಗಿದೆ.








