By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌
KarnatakaMysorePolitics

ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌.ಎ.ರಾಮದಾಸ್‌

Team Varthaman
Last updated: January 2, 2026 7:10 PM
Team Varthaman
Published: January 2, 2026
Share
SHARE

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ೩೨ ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್‌.ಎ.ರಾಮದಾಸ್‌ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಆ ಮೂಲಕ ಹಳೆ ಮೈಸೂರು ಭಾಗದ ಹಿರಿಯ ರಾಜಕಾರಣಿಯೊಬ್ಬರು ತಮ್ಮ ರಾಜಕೀಯಕ್ಕೆ ಭಾವುಕ ವಿದಾಯ ಹೇಳಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರುವ ಕ್ಯಾಲೆಂಡ‌ರ್ ಬಿಡುಗಡೆಗೊಳಿಸಿ ಮಾತನಾಡಿರುವ ಅವರು ಹೇಳಿರುವುದಿಷ್ಟು. ನಾನು ಬಿಜೆಪಿ ಬಿಡುವುದಿಲ್ಲ. ಆದರೆ ಸುತ್ತೂರು ಸ್ವಾಮೀಜಿ ಸೇರಿದಂತೆ ನನ್ನನ್ನು ಹತ್ತಿರದಿಂದ ಬಲ್ಲ ಅನೇಕರು ನೀವು ಮತ್ತೆ ಸಕ್ರಿಯವಾಗಿ ಸಮಾಜದ ಜತೆ ಇರಬೇಕು ಎಂದು ಹೇಳುತ್ತಿದ್ದಾರೆ. ನನಗೆ ಚುನಾವಣಾ ರಾಜಕೀಯ ಸಾಕಾಗಿದೆ. ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ . ಶ್ರೀರಾಮನಿಗೆ ನಾಳೆ ಪಟ್ಟಾಭಿಷೇಕ ಆಗಬೇಕಿತ್ತು.

Join WhatsApp Group

ಹಿಂದಿನ ರಾತ್ರಿ ದಶರಥನ ಮೂಲಕ ಕಾಡಿಗೆ ಹೋಗುವಂತೆ ಹೇಳಿಸಲಾಯಿತು. ಅಂತಹ ಶ್ರೀರಾಮಚಂದ್ರನೇ ಮರು ಮಾತನಾಡದೇ ಕಾಡಿಗೆ ಹೊರಟು ಹೋದ. ನಾನು ರಾಮದಾಸ, ನಾನೇನು ಮಾಡಲಿ. ಭಾರತೀಯ ಜನತಾ ಪಕ್ಷ ನನಗೆ ತಾಯಿ ಇದ್ದಂತೆ. ಯಾವುದೇ ಕಾರಣಕ್ಕೂ ತಾಯಿಗೆ ದ್ರೋಹ ಮಾಡುವುದಿಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದರು. ನಾನು ಊಟಕ್ಕೆ ಕುಳಿತಿದ್ದೆ. ನನ್ನನ್ನು ಎಬ್ಬಿಸಿ ಬೇರೆಯವರನ್ನು ತಂದು ಕೂರಿಸಿದರು. ನಾನು ಎಲ್ಲರಿಗೂ ಊಟ ಬಡಿಸಿದ್ದೇನೆ. ಅದ್ಯಾವುದರ ಬಗ್ಗೆಯೂ ನನಗೆ ದುಃಖವಿಲ್ಲ. ನನ್ನ ತಂದೆ ಮಾಜಿ ಸೈನಿಕ. ನಾನೂ ಸೇನೆಗೆ ಸೇರಬೇಕು ಎಂದುಕೊಂಡಿದ್ದೆ. ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ. ನನಗಿನ್ನೂ ಚೆನ್ನಾಗಿ ನೆನಪಿದೆ. 1994ರ ನವೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದು ರಾತ್ರಿ ಮನೆಗೆ ಬಂದೆ. ಒಂದೆ ಕಡೆ ತಂದೆ, ಮತ್ತೊಂದು ಕಡೆ ತಾಯಿ ನಿಂತಿದ್ದರು. ಇಬ್ಬರೂ ಹೆಗಲ ಮೇಲೆ ಕೈಹಾಕಿ ರಾಜಕೀಯ ತುಂಬಾ ಕೆಟ್ಟದ್ದು, ನಿನ್ನ ಕೈ ಕೆಸರು ಮಾಡಿಕೊಳ್ಳಬೇಡ, ರಕ್ತ ಅಶುದ್ಧ ಮಾಡಿಕೊಳ್ಳಬೇಡ. 30 ವರ್ಷ ರಾಜಕೀಯ ಮಾಡಿದ್ದೇನೆ. ಈಗಲೂ ನಾನು ಕೈ ಮತ್ತು ರಕ್ತವನ್ನು ಅಶುದ್ಧ ಮಾಡಿಕೊಂಡಿಲ್ಲ ಎಂದರು. ನನ್ನ ಕುಟುಂಬದವರ ಆಸ್ತಿ ನನ್ನದಲ್ಲ: ಅವರಿಗೇನು ಕೊರತೆ, ಅರ್ಧ ಮೈಸೂರು ಅವರದ್ದು ಅಂತೆಲ್ಲ ಹೊರಗೆ ಜನ ಮಾತನಾಡುತ್ತಾರೆ. ನನ್ನ ಕುಟುಂಬದಲ್ಲಿ ಉದ್ಯಮಿಗಳಿದ್ದಾರೆ, ಅದರಲ್ಲಿ ತಪ್ಪೇನು? ಅವರ ಬಳಿ ಇರುವ ಯಾವುದೂ ನನ್ನದಲ್ಲ. 1.50 ಲಕ್ಷ ರೂ. ನಿವೃತ್ತ ವೇತನ ಬರುತ್ತೆ, ನನ್ನ ಜೀವನಕ್ಕೆ ಅಷ್ಟು ಸಾಕೆಂದು ಸ್ಮರಿಸಿದರು.

ನಾನು ಚುನಾವಣಾ ರಾಜಕೀಯ ಮಾಡುವುದಿಲ್ಲ. ರೋಗ ಬಂದಾಗ ಚಿಕಿತ್ಸೆ ಪಡೆಯುವುದು ಬೇರೆ, ಕಾಯಿಲೆಯೇ ಬಾರದ ರೀತಿಯಲ್ಲಿ ಪರಿಸರ ಉಳಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಚಿಂತನೆ ಮಾಡುತ್ತಿದ್ದೇನೆ. ಒಂದು ವರ್ಷದಿಂದ ಅಧ್ಯಯನ ಮಾಡುತ್ತಿದ್ದು, ಶೀರ್ಘದಲ್ಲೇ ಪರಿಸರ ಸಂರಕ್ಷಣಾ ಕಾರ್ಯದ ಮೂಲಕ ಸಾಮಾಜಿಕವಾಗಿ ತೊಡಗಿಸಿಕೊಳ್ಳುತ್ತೇನೆ ಎಂದರು. ಈ ಹಿಂದೆ ಜನೌಷಧಿ ಕೇಂದ್ರ ತೆರೆದಾಗ ಔಷಧಿ ಕಂಪನಿಗಳು ಲಾಬಿ ಮಾಡಿದವು. ರಾಜ್ಯದ ವಿವಿಧೆಡೆ ನನ್ನ ವಿರುದ್ಧ ಪ್ರತಿಭಟನೆ ನಡೆಸಿ, ಭಾವಚಿತ್ರಕ್ಕೆ ಅಪಮಾನಿಸಿದವು. ಆದರೆ ಎದೆಗುಂದಲಿಲ್ಲ. ಬಳಿಕ ಅದು ಎಷ್ಟು ಜನಪ್ರಿಯವಾಯಿತೆಂದರೆ ದೇಶದಾದ್ಯಂತ ಪ್ರಧಾನಮಂತ್ರಿ ಜನೌಷಧಿ ಕೇಂದ್ರವಾಗಿ ಸಾವಿರಾರು ಸಂಖ್ಯೆಯಲ್ಲಿ ಆರಂಭವಾದವು.

ರಾಮದಾಸ್‌ ರಾಜಕೀಯ ಹಾದಿ

  • ೧೯೯೫ರಿಂದ ೧೯೯೭ರವರೆಗೆ ಮತ್ತು ೧೯೯೭ ರಿಂದ ೨೦೦೦ವರೆಗೆ ಎರಡು ಬಾರಿ ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ ಸೇವೆ
  • ೧೯೯೪ರಲ್ಲಿ ಕೃಷ್ಣರಾಜ ಕ್ಷೇತ್ರದ ಮೂಲಕ ಸ್ಪರ್ಧಿಸಿ ೯೫೦೦ ಮತಗಳಿಂದ ಶಾಸಕರಾಗಿ ಆಯ್ಕೆ
  • ೧೯೯೯ ೧೦ ಸಾವಿರ, ೨೦೦೮ ೧೯ಸಾವಿರ, ೨೦೧೩ರಲ್ಲಿ ೨೬೫೦೦ ಮತಗಳ ಅಂತರದಲ್ಲಿ ಗೆದ್ದು ಮರು ಆಯ್ಕೆ
  • ೨೦೦೮ರಲ್ಲಿ ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ
  • ೨೦೧೦ರಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ
  • ೨೦೦೪ರಲ್ಲಿ ಕಾಂಗ್ರೆಸ್‌ ಎದುರು ಸೋಲು
  • ೨೦೧೩ರಲ್ಲಿಯೂ ಬಿಜೆಪಿ-ಕೆಜೆಪಿ ಇಬ್ಬಾಗದಿಂದ ಸೋಲು ಕಂಡಿದ್ದರು.
  • ಪ್ರಸ್ತುತ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ ಜಿಲ್ಲೆಯ ಬಿಜೆಪಿ ರಾಜ್ಯ ಉಸ್ತುವಾರಿ ಆಗಿರುವರು.

ಇದನ್ನು ಓದಿ –ಫೆ. 1ರಿಂದ ಫಾಸ್ಟ್‌ಟ್ಯಾಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ

ಆಸರೆ ಪೌಂಡೇಶನ್‌ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ರಾಮದಾಸ್‌ ಎಚ್‌ ಐವಿ ಪೀಡಿತರ ಗುಣಮುಖರಾಗಿಸುವಲ್ಲಿ ವಿಶೇಷ ಅಭಿಯಾನ ಕೈಗೊಂಡಿದ್ದರು. ದಕ್ಷಿಣ ಕರ್ನಾಟಕದಲ್ಲಿ ಪ್ರಧಾನಿ ಅಪ್ತ ರಾಜಕಾರಣಿ ಎಂಬ ಕೀರ್ತಿ ಪಡೆದಿದ್ದವರು ೧೧ದಿನಗಳ ಕಾಲ ಮೋದಿ ಯುಗ ಉತ್ಸವ ಹೆಸರಿನಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ಅನುಷ್ಠಾನ, ಅರ್ಹ ಫಲಾನುವಿಗಳಿಗೆ ಸೌಲಭ್ಯ ವಿತರಣೆಯಂತಹ ಕಾರ್ಯಗಳನ್ನು ಮಾಡುವಲ್ಲಿ ಮುಂಚೂಣೆಯಲ್ಲಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ನಿರ್ಮಾಣದಲ್ಲಿ ಮೊದಲಿಗರಾಗಿದ್ದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
೧೩೬ ಕಿ.ಮೀ. ದೀಪಾಲಂಕಾರದ ಮೆರುಗು: ಚೆಸ್ಕಾಂ ಎಂಡಿ
ಕೊರೋನಾ ತರ ಮತ್ತೊಂದು ರೋಗ, ಯುದ್ಧ, ಸಾವು ನೋವುಗಳು ಸಂಭವಿಸುವ ಭಯಾನಕ ಭವಿಷ್ಯವಾಣಿ
ಯುದ್ಧ ಬೇಡ, ಶಾಂತಿಯೇ ಮುಖ್ಯ – ಪಾಕಿಸ್ತಾನ ವಿಚಾರದಲ್ಲಿ ಕೇಂದ್ರದ ನಿರ್ಧಾರಕ್ಕೆ ಕೈ ಜೋಡಿಸುತ್ತೇವೆ
ಸಿಪಿಕೆ ಪತ್ನಿ ಶಾರದಾ ನಿಧನ
58 ವರ್ಷದ ಮಾಲಾಧಾರಿ ಮಹಿಳೆ ಸಾವು
TAGGED:breakingnewslatestnewsMysore Newspolitical retirementS A Ramdas
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreTrending

ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ಅವಘಡ: ಓರ್ವ ಸಜೀವದಹನ

Team Varthaman
Team Varthaman
March 17, 2026
ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
ಹೇಮಾವತಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಳ
ಚಿನ್ನದ ಬೆಲೆ ಮೇಲ್ವಿಚಾರಣೆ – ನಿರ್ಮಲಾ ಸೀತಾರಾಮನ್
ಮೇ 1 ರಿಂದ GPS ಆಧಾರಿತ ಟೋಲ್ ಸಂಗ್ರಹ ಆರಂಭ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?