ಬೆಂಗಳೂರು: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಭಾರತೀಯ ಜನತಾ ಪಕ್ಷ ಯಲ್ಲಿ ಮತ್ತಿಬ್ಬರು ಶಾಸಕರ ತಲೆದಂಡವಾಗಿದೆ.
ಶಾಸಕ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಈ ಹಿಂದೆ ಬಿಜೆಪಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಮಾತನಾಡುತ್ತಿದ್ದ ಮತ್ತು ಕಾಂಗ್ರೆಸ್ ಪಾಳಯದಲ್ಲಿ ಪದೇ ಪದೇ ಗುರುತಿಸಿಕೊಳ್ಳುತ್ತಿದ್ದ ರೆಬೆಲ್ ಶಾಸಕರಾದ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ನಿರೀಕ್ಷೆಯಂತೆಯೇ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಮುಂದಿನ 6 ವರ್ಷಗಳ ಕಾಲ ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.
ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ:
ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.ಇದನ್ನು ಓದಿ –KRS ಡ್ಯಾಂನಲ್ಲಿ 3 ಅಡಿ ನೀರಿನ ಹೆಚ್ಚಳ
ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು, ‘ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲಾ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.