ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ (Dharmasthala Mass Burials) ಎಸ್‌ಐಟಿ (SIT) ತನಿಖೆ ನಡೆಯುತ್ತಿರುವುದರಿಂದ, ತನಿಖೆ ಪೂರ್ಣಗೊಳ್ಳುವವರೆಗೆ ಎಲ್ಲರೂ ಧಾರ್ಮಿಕ ಸ್ಥಳದ ಪಾವಿತ್ರತೆಯನ್ನು ಕಾಪಾಡಬೇಕು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಧರ್ಮಸ್ಥಳ ಕೇಸ್ ಕುರಿತು ನಾನು ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. ಮಂಗಳವಾರ ವಿರೋಧ ಪಕ್ಷಗಳು ಚರ್ಚೆಗೆ ಅವಕಾಶ ಕೇಳಿದಾಗ ಶೂನ್ಯವೇಳೆಯಲ್ಲಿ ಅವಕಾಶ ನೀಡಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ನೀಡಿತ್ತು. ಇನ್ನಷ್ಟು ಚರ್ಚೆಗೆ ಅವಕಾಶ ಬೇಕೆಂದು ಕೇಳಿದ್ದರಿಂದ, ನಾನು ಅದಕ್ಕೂ ಅವಕಾಶ ನೀಡಲು ಸಮ್ಮತಿಸಿದ್ದೇನೆ” ಎಂದರು.
“ಈ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ. ತನಿಖೆ ನಡೆಯುತ್ತಿರುವಾಗಲೇ ತೀರ್ಪು ನೀಡುವುದು ಸರಿಯಲ್ಲ. ಧಾರ್ಮಿಕ ಸ್ಥಳದ ಪಾವಿತ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ.ಇದನ್ನು ಓದಿ –ಮಂಡ್ಯ: ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ದುರ್ಮರಣ
ತನಿಖೆ ಮುಗಿಯುವವರೆಗೂ ಯಾರೂ ಸ್ವಯಂ ಅಭಿಪ್ರಾಯ ನೀಡಬಾರದು. ನಾವು ಸಮಾನತೆ ಮತ್ತು ಸೋದರಭಾವದಲ್ಲಿ ಇರುವ ಸಮಾಜ. ಹೀಗಾಗಿ ತನಿಖೆ ಪೂರ್ಣಗೊಳ್ಳುವವರೆಗೆ ಸಮಾಧಾನದಿಂದ ಇರಬೇಕು” ಎಂದು ಖಾದರ್ ಸ್ಪಷ್ಟಪಡಿಸಿದರು.