ನವದೆಹಲಿ: ದಲಿತ ಸಮುದಾಯದವರು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರವಾದಲ್ಲಿ ಅವರಿಗೆ ಎಸ್‌ಸಿ ಮೀಸಲಾತಿ ಹಾಗೂ ಸಂಬಂಧಿತ ಸೌಲಭ್ಯಗಳು ದೊರೆಯುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಈ ತೀರ್ಪು ಪ್ರಕಟಿಸಿದ್ದು, ಮತಾಂತರವಾದ ಬಳಿಕ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಾಯ್ದುಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಕ್ರೈಸ್ತ ಧರ್ಮ ಸೇರಿದಂತೆ ಇತರೆ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಗಳು ಎಸ್‌ಸಿ ಮೀಸಲಾತಿ, ಸೌಲಭ್ಯಗಳು ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ರಕ್ಷಣೆಗೆ ಅರ್ಹರಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.ಇದನ್ನು ಓದಿ –17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ರಾಜ್ಯಾದ್ಯಂತ ಮಳೆ ಸಾಧ್ಯತೆ
ಹಳೆಯ ಪರಿಶಿಷ್ಟ ಜಾತಿ ಪ್ರಮಾಣಪತ್ರದ ಆಧಾರದಲ್ಲಿ ಸೌಲಭ್ಯ ಪಡೆಯಲು ಯತ್ನಿಸಿದ ಪ್ರಕರಣದ ವಿಚಾರಣೆ ವೇಳೆ ಈ ತೀರ್ಪು ನೀಡಲಾಗಿದೆ. ಈ ತೀರ್ಪು ದೇಶಾದ್ಯಂತ ಮಹತ್ವದ ಚರ್ಚೆಗೆ ಕಾರಣವಾಗಿದೆ.








