ಬೆಂಗಳೂರು:ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾದರು.
ತಯ್ಯಿಲ್ ಜೇಕಬ್ ಸೋನಿ ಜಾರ್ಜ್ (TJS George) ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದ ಇವರು ನಂತರ ಮುಂಬೈನ ಫ್ರೀ ಪ್ರೆಸ್ ಜರ್ನಲ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಿದರು.
ದಶಕಗಳ ಕಾಲ ಅವರು ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್, ದಿ ಸರ್ಚ್‌ಲೈಟ್, ಫಾರ್ ಈಸ್ಟರ್ನ್ ಎಕನಾಮಿಕ್ ರಿವ್ಯೂಗಳಿಗೆ ಬರೆದಿದ್ದರು. ಹಾಂಗ್ ಕಾಂಗ್‌ನಲ್ಲಿ ಏಷ್ಯಾವೀಕ್‌ನ ಸ್ಥಾಪಕ ಸಂಪಾದಕರಾದರು.
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಂಪಾದಕೀಯ ಸಲಹೆಗಾರರಾಗಿ ಜಾರ್ಜ್ ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಪ್ತಾಹಿಕ ಅಂಕಣ ‘ಪಾಯಿಂಟ್ ಆಫ್ ವ್ಯೂ‘ 25 ವರ್ಷಗಳ ಕಾಲ ಬರೆದಿದ್ದರು. ಜೂನ್ 2022 ರಲ್ಲಿ ಕೊನೆಯ ಬಾರಿ ಬರೆದು ತಮ್ಮ ಅಂಕಣ ಬರಹಕ್ಕೆ ಪೂರ್ಣ ವಿರಾಮ ಹಾಕಿದರು. ಜಾರ್ಜ್ ಅವರ ಪಾಯಿಂಟ್ ಆಫ್ ವ್ಯೂ ಕನ್ನಡಪ್ರಭದಲ್ಲಿ ʼನೇರಮಾತುʼ ಹೆಸರಿನಲ್ಲಿ ಪ್ರಕಟವಾಗುತ್ತಿತ್ತು.ಇದನ್ನು ಓದಿ –ರಾಜ್ಯದ ಎಲ್ಲ ಚುನಾವಣೆಗಳಿಗೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯಲಿದೆ: HDD
1,300 ವಾರಗಳ ಕಾಲ ನಿರಂತರ ಅಂಕಣ ಬರೆದಿದ್ದ ಇವರು ನೂರಾರು ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು. ಸಾಹಿತ್ಯ ಮತ್ತು ಶಿಕ್ಷಣಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 2011 ರಲ್ಲಿ ಕೇಂದ್ರ ಸರ್ಕಾರ ಇವರಿಗೆ
ಪದ್ಮಭೂಷಣ ಪ್ರಶಸ್ತಿ ನೀಡಿದೆ.








