By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಸ್ಥಳೀಯರ ಸಲಹೆಯೊಂದಿಗೆ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Manglore > ಸ್ಥಳೀಯರ ಸಲಹೆಯೊಂದಿಗೆ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ
KarnatakaMangloreTrending

ಸ್ಥಳೀಯರ ಸಲಹೆಯೊಂದಿಗೆ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ

Team Varthaman
Last updated: January 10, 2026 12:31 PM
Team Varthaman
Published: January 10, 2026
Share
SHARE

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ಸ್ಥಳೀಯ ಜನಪ್ರತಿನಿಧಿಗಳು, ಉದ್ಯಮಿಗಳು, ಡೆವೆಲಪರ್‌ಗಳು ಮತ್ತು ಹೂಡಿಕೆದಾರರ ಅಭಿಪ್ರಾಯ ಪಡೆದು ಸರ್ಕಾರ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಮತ್ತು ಗೋವಾದಂತೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವಲ್ಲಿ ಕರ್ನಾಟಕ ಹಿಂದೆ ಉಳಿದಿದೆ ಎಂದರು. ಮಂಗಳೂರಿನ ಹಲವರು ಉದ್ಯೋಗಕ್ಕಾಗಿ ಸೌದಿ, ದುಬೈ, ಯುಎಇ ಹಾಗೂ ಬೆಂಗಳೂರು ಕಡೆಗೆ ವಲಸೆ ಹೋಗುತ್ತಿದ್ದಾರೆ. ಇಲ್ಲಿ ಒಂದೂ ಪಂಚತಾರ ಹೋಟೆಲ್ ಇಲ್ಲ, ಸಮರ್ಪಕವಾಗಿ ಅಭಿವೃದ್ಧಿಗೊಂಡ ಪ್ರವಾಸಿ ತಾಣಗಳೂ ಕಡಿಮೆ. ರಾಜ್ಯದ ಸುಮಾರು 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಅಪಾರ ಪ್ರಕೃತಿ ಸಂಪತ್ತು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನೇತೃತ್ವದ ಸರ್ಕಾರಗಳೆರಡರ ವೈಫಲ್ಯವೂ ಕಾರಣ ಎಂದು ಅಭಿಪ್ರಾಯಪಟ್ಟರು.

Join WhatsApp Group

ಕೇರಳ ಹಾಗೂ ಗೋವಾದಲ್ಲಿ ಪ್ರವಾಸೋದ್ಯಮ ಹೇಗೆ ಅಭಿವೃದ್ಧಿಯಾಯಿತು ಎಂಬುದನ್ನು ಅಧ್ಯಯನ ಮಾಡಿ, ನಮ್ಮಲ್ಲಿರುವ ಸಂಪತ್ತು ಹಾಗೂ ಯುವಜನರ ಕ್ರಿಯಾಶೀಲತೆಯನ್ನು ಬಳಸಿಕೊಂಡು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕಾಗಿದೆ. ನಮ್ಮದೇ ಜನ ಬೆಳೆಯಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಈ ಕುರಿತು ಕರಾವಳಿ ಭಾಗದ ಎಲ್ಲ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಅವರೂ ಈ ಯೋಜನೆಗೆ ಆಸಕ್ತಿ ತೋರಿದ್ದಾರೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಪ್ರವಾಸೋದ್ಯಮ ನೀತಿ ಕುರಿತು ಚರ್ಚೆ ನಡೆದಾಗ, ಇಂತಹ ಸಾಮಾನ್ಯ ನೀತಿ ಕರಾವಳಿ ಅಭಿವೃದ್ಧಿಗೆ ಸೂಕ್ತವಲ್ಲ ಎಂದು ಮುಖ್ಯ ಕಾರ್ಯದರ್ಶಿಗೆ ತಿಳಿಸಿದ್ದೇನೆ. ಈ ವಿಷಯವನ್ನು ವಿಧಾನಸಭೆಯಲ್ಲೂ ಚರ್ಚಿಸಲಾಗಿದೆ. ಕರಾವಳಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

ವಿದೇಶಗಳಲ್ಲಿ, ವಿಶೇಷವಾಗಿ ಕೊಲ್ಲಿ ರಾಷ್ಟ್ರಗಳಲ್ಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಈ ಭಾಗದ ಅನೇಕ ಉದ್ಯಮಿಗಳು ಸರ್ಕಾರ ಸಹಕಾರ ನೀಡಿದರೆ ಹೂಡಿಕೆಗೆ ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇಲ್ಲಿನ ಯುವಜನರು ಉತ್ತಮ ಸಾಮರ್ಥ್ಯ ಹೊಂದಿದ್ದು, ವಿದೇಶಗಳಲ್ಲಿ ಸಾಧನೆ ಮಾಡಿದ್ದಾರೆ. ತಮ್ಮ ಊರು ಮತ್ತು ಜನ್ಮಭೂಮಿಯ ಅಭಿವೃದ್ಧಿಗೆ ಕೈಜೋಡಿಸಲು ಅವರು ಆಸಕ್ತರಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವುದು ಅಗತ್ಯವಾಗಿದ್ದು, ಅದನ್ನು ಕೆಲವೇ ಅಧಿಕಾರಿಗಳು ಸೇರಿ ರೂಪಿಸಿದರೆ ಸಾಲದು. ಈ ಹಿನ್ನೆಲೆಯಲ್ಲಿ ಇಂದು ಈ ಭಾಗದ ಜನರ ಸಭೆ ಕರೆಯಲಾಗಿದೆ. ಯೋಜನೆಗೆ ಎದುರಾಗುವ ಅಡಚಣೆಗಳು ಏನು, ಸರ್ಕಾರ ಯಾವ ರೀತಿಯ ಸಹಾಯ ಮಾಡಬಹುದು ಎಂಬುದರ ಕುರಿತು ಚರ್ಚಿಸಲಾಗುವುದು. ಸರ್ಕಾರ ಮೂಲಸೌಕರ್ಯ ಒದಗಿಸಲಿದೆ; ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಅಗತ್ಯವಿದ್ದು, ಖಾಸಗಿ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದರು.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಜನಪ್ರತಿನಿಧಿಗಳು, ಉದ್ಯಮಿಗಳು ಮತ್ತು ಹೂಡಿಕೆದಾರರ ಆಲೋಚನೆಗಳನ್ನು ತಿಳಿದುಕೊಳ್ಳಬೇಕಿದೆ. ಕಾನೂನುಬದ್ಧವಾಗಿ ಯಾವ ಅವಕಾಶಗಳಿವೆ ಎಂಬುದನ್ನೂ ಚರ್ಚಿಸಲಾಗುವುದು. ಅದಕ್ಕಾಗಿ ಕರಾವಳಿ ರಕ್ಷಣಾ ವಲಯ ಪ್ರಾಧಿಕಾರ, ರಕ್ಷಣಾ ಇಲಾಖೆ ಸೇರಿದಂತೆ ಸಂಬಂಧಿತ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ನೀತಿ ನಿಯಮಗಳಲ್ಲಿ ಯಾವ ಬದಲಾವಣೆಗಳನ್ನು ಮಾಡಬಹುದು ಎಂಬ ಬಗ್ಗೆ ಸಾರ್ವಜನಿಕ ಚರ್ಚೆ ನಡೆಸಿ, ಸಮಾಲೋಚನೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದನ್ನು ಓದಿ –ಚಾಮರಾಜನಗರದಲ್ಲಿ ತಾಯಿ ಹುಲಿ ಸೆರೆ

ಪರಿಶಿಷ್ಟ ಜಾತಿಯವರ ಒಳಮೀಸಲಾತಿ ಮಸೂದೆ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ ಹಾಗೂ ದ್ವೇಷ ಭಾಷಣ ತಡೆ ಮಸೂದೆಗಳಿಗೆ ಇನ್ನೂ ರಾಜ್ಯಪಾಲರ ಅಂಗೀಕಾರ ಸಿಗದಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
    March 21, 2026
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
    March 21, 2026
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
    March 21, 2026
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
    March 20, 2026
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
    March 20, 2026
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ
ಲಂಚ ಪಡೆಯುತ್ತಿದ್ದ ವೈದ್ಯಕೀಯ ಅಧೀಕ್ಷಕ ಲೋಕಾಯುಕ್ತ ಬಲೆಗೆ
ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
TAGGED:breakingnewscostal KarnatakaDK shivkumarlatestnewstourism policy
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಪಾಸ್‌ಪೋರ್ಟ್ ಪರಿಶೀಲನೆಗೆ ಹೊಸ ಮಾರ್ಗಸೂಚಿ

Team Varthaman
Team Varthaman
February 27, 2026
ಕಾಲುವೆಗೆ ಈಜಲು ಹೋಗಿ ಮೂವರು ಬಾಲಕರ ಜಲ ಸಮಾಧಿ
ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ನೀಡುತ್ತೇವೆ ಎಂದು ನಾವು ಹೇಳಿಲ್ಲ: ಡಿಕೆ ಶಿವಕುಮಾರ್
1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ
CUET UG 2025 ಪ್ರವೇಶ ಪತ್ರ ಬಿಡುಗಡೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?