By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಶಾಮನೂರು ಶಿವಶಂಕರಪ್ಪ ವಿಧಿವಶ -ಇಂದು ಸಂಜೆ ಅಂತ್ಯಸಂಸ್ಕಾರ 
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Davanagere > ಶಾಮನೂರು ಶಿವಶಂಕರಪ್ಪ ವಿಧಿವಶ -ಇಂದು ಸಂಜೆ ಅಂತ್ಯಸಂಸ್ಕಾರ 
DavanagereKarnatakaLatest News

ಶಾಮನೂರು ಶಿವಶಂಕರಪ್ಪ ವಿಧಿವಶ -ಇಂದು ಸಂಜೆ ಅಂತ್ಯಸಂಸ್ಕಾರ 

Team Varthaman
Last updated: December 15, 2025 10:26 AM
Team Varthaman
Published: December 15, 2025
Share
SHARE

ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರ ಇಂದು ಸಂಜೆ ದಾವಣಗೆರೆ ಹೊರವಲಯದ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಅವರ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲು ಸಿದ್ಧತೆಗಳನ್ನು ಮಾಡಲಾಗಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಿಂದ ಮಧ್ಯರಾತ್ರಿ ಹೊರಟ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಸುಮಾರು 4 ಗಂಟೆಗೆ ದಾವಣಗೆರೆಗೆ ತಲುಪಿತು. ಮೊದಲಿಗೆ ಹಿರಿಯ ಪುತ್ರ ಎಸ್‌.ಎಸ್‌. ಬಕ್ಕೇಶ್ ಅವರ ನಿವಾಸಕ್ಕೆ, ನಂತರ ಎಸ್‌.ಎಸ್‌. ಗಣೇಶ್ ಅವರ ಮನೆಗೆ ಹಾಗೂ ಮೂರನೇ ಪುತ್ರ, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಮೃತದೇಹವನ್ನು ಕರೆದೊಯ್ಯಲಾಯಿತು. ಈ ಮೂರು ಮನೆಗಳಲ್ಲಿಯೂ ಕಣ್ವೆಕುಪ್ಪೆ ಶ್ರೀಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.

Join WhatsApp Group

ವಿಧಿ ವಿಧಾನಗಳ ನಂತರ ಶಾಮನೂರು ಶಿವಶಂಕರಪ್ಪ ಅವರ ನಿವಾಸದ ಮುಂಭಾಗ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅನೇಕ ಗಣ್ಯರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ಸಾರ್ವಜನಿಕ ದರ್ಶನ ಮುಗಿದ ಬಳಿಕ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಅಂತಿಮಯಾತ್ರೆ ಮೆರವಣಿಗೆ ಆರಂಭವಾಗಲಿದೆ. ಹೈಸ್ಕೂಲ್ ಮೈದಾನದಿಂದ ಹೊರಡುವ ಮೆರವಣಿಗೆ ಹಳೆಯ ಕೋರ್ಟ್ ಮೈದಾನ, ಎಸಿ ಕ್ರಾಸ್, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನ, ಹಗೆದಿಬ್ಬ ಸರ್ಕಲ್, ಕಾಳಿಕಾಂಬ ದೇವಸ್ಥಾನ ರಸ್ತೆ, ಗ್ಯಾಸ್ ಕಟ್ಟೆ ಸರ್ಕಲ್, ಬಕ್ಕೇಶ್ವರ ದೇವಸ್ಥಾನ ಮುಂಭಾಗ, ಹಾಸಭಾವಿ ಸರ್ಕಲ್, ಗಣೇಶ ದೇವಸ್ಥಾನ, ಅರಳಿ ಮರ ಸರ್ಕಲ್ ಹಾಗೂ ವೆಂಕಟೇಶ್ವರ ಸರ್ಕಲ್ ಮೂಲಕ ಸಾಗುತ್ತಾ ಕಲ್ಲೇಶ್ವರ ರೈಸ್ ಮಿಲ್‌ಗೆ ತಲುಪಲಿದೆ.

ದಾವಣಗೆರೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶಾಮನೂರು ಶಿವಶಂಕರಪ್ಪ ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಗರದಲ್ಲಿ ದೀರ್ಘ ಮೆರವಣಿಗೆ ನಡೆಸಬೇಕೆಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಒತ್ತಾಯಿಸಿದ್ದರು. ಅವರ ಮನವಿಗೆ ಸ್ಪಂದಿಸಿ ಸುಮಾರು 15 ಕಿ.ಮೀ ದೂರದ ಅಂತಿಮಯಾತ್ರೆ ಮೆರವಣಿಗೆ ಆಯೋಜಿಸಲಾಗಿದ್ದು, ಸಂಜೆ ಸುಮಾರು 6 ಗಂಟೆಯ ವೇಳೆಗೆ ಅಂತ್ಯಸಂಸ್ಕಾರ ನಡೆಯಲಿದೆ.

  • ಜೆನೆರಿಕ್ ಔಷಧಗಳ ಮೇಲೆ ಟ್ರಂಪ್ ಟ್ಯಾರಿಫ್; ಭಾರತದ ಫಾರ್ಮಾ ಉದ್ಯಮಕ್ಕೆ ಆತಂಕ
    by Team Varthaman
  • ಸಚಿವ ಸಂಪುಟ ವಿಸ್ತರಣೆ ಹೈ ತೀರ್ಮಾನ: ಡಿ.ಕೆ. ಶಿವಕುಮಾರ್
    by Team Varthaman
  • ಅತ್ಯಾಚಾರ ಪ್ರಕರಣ: ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನಕ್ಕೆ ಆದೇಶ
    by Team Varthaman
  • ಮನೆ ಬಾಗಿಲಿಗೆ ಶಾಶ್ವತ ನಿವಾಸ, ಜಾತಿ ಪತ್ರ ಸೇವೆ
    by Team Varthaman
  • ಇಂದು ಹೊಳೆನರಸೀಪುರದಲ್ಲಿ ಚೆನ್ನಮ್ಮ ದೇವೇಗೌಡರ ಅಂತಿಮ ಸಂಸ್ಕಾರ
    by Team Varthaman
IPL ಟಿಕೆಟ್ ದಂಧೆ : KSCA ಸದಸ್ಯ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌
ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣೆ
ದೇವರು ವರ-ಶಾಪ ನೀಡಲ್ಲ: ಸಿದ್ದರಾಮಯ್ಯರನ್ನು ಹೊಗಳಿದ ಡಿಕೆಶಿ
ಬೆಂಗಳೂರಿನ ಫೋಥಿಸ್ ಬಟ್ಟೆ ಶೋ ರೂಮ್ ಮೇಲೆ IT ದಾಳಿ
ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದ ಒಪ್ಪಿಗೆ
TAGGED:breakingnewsDavangerelatestnewsShivashankarappaಶಾಮನೂರುಶಿವಶಂಕರಪ್ಪ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaPolitics

ಸರ್ಕಾರದ ‘ರಿಯಲ್ ಎಸ್ಟೇಟ್’ ಕೆಲಸ :ಡಿಕೆಶಿ ವಿರುದ್ಧ ಹೆಚ್.ಡಿ.ಕೆ ವಾಗ್ದಾಳಿ

Team Varthaman
Team Varthaman
May 14, 2026
ಈ ವರ್ಷ ಮೇ 27ರಿಂದ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ!
ಶೀಘ್ರದಲ್ಲೇ ಆಟೋ ದರ ಏರಿಕೆ ಘೋಷಣೆ ?
ಹಣಕಾಸು ವಿವಾದ: 13 ದಿನಗಳ ಬಳಿಕ ಹಲ್ಲೆಗೊಳಗಾದ ಯುವಕನ ಸಾವು
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ – 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?