ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬೆಳವಣಿಗೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆದ ಸಚಿವರ ಉಪಾಹಾರ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. “ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಸಿಎಂ ಅವರ ಈ ದಿಢೀರ್ ಘೋಷಣೆಯಿಂದ ಸಭೆಯಲ್ಲಿ ಭಾಗಿಯಾಗಿದ್ದ ಹಲವು ಸಚಿವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರದ ಅವಧಿಯಲ್ಲಿ ಬೆಂಬಲವಾಗಿ ನಿಂತ ಸಚಿವರು ಹಾಗೂ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಸಹ ಸಭೆಯಲ್ಲಿ ಪ್ರಾಥಮಿಕ ಚರ್ಚೆ ನಡೆದಿದೆ ಎನ್ನಲಾಗಿದೆ.ಇದನ್ನು ಓದಿ –IPL ವೇಳಾಪಟ್ಟಿ ಬದಲಾವಣೆ? BCCI ಚಿಂತನೆ
ಸಿದ್ದರಾಮಯ್ಯ ರಾಜೀನಾಮೆ ಘೋಷಣೆಯ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರಗೊಂಡಿದೆ.








