By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ದೇವರಾಜ ಅರಸು ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ದೇವರಾಜ ಅರಸು ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ
BengaluruKarnatakaMain News

ದೇವರಾಜ ಅರಸು ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ

Team Varthaman
Last updated: January 6, 2026 11:20 AM
Team Varthaman
Published: January 6, 2026
Share
SHARE
  • ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ

ಬೆಂಗಳೂರು: ರಾಜ್ಯದಲ್ಲಿ ಸುದೀರ್ಘ ಅವಧಿ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜ. 6) ಸರಿಗಟ್ಟಿದ್ದಾರೆ. ಇದರೊಂದಿಗೆ, ಕರ್ನಾಟಕದಲ್ಲಿ ಅತಿ ಹೆಚ್ಚು ದಿನಗಳು ಸರ್ಕಾರದ ಚುಕ್ಕಾಣಿ ಹಿಡಿದ ನಾಯಕರ ಸಾಲಿಗೆ ಅವರು ಸೇರ್ಪಡೆಯಾಗಿದ್ದಾರೆ.

ಈ ಸಾಧನೆಯ ಜೊತೆಗೆ, ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯೂ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. ಈಗಾಗಲೇ 16 ಬಾರಿ ಬಜೆಟ್ ಮಂಡಿಸಿರುವ ಅವರು, 2026–27ನೇ ಸಾಲಿನಲ್ಲಿ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ.

Join WhatsApp Group

ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ನೆಲಮಂಗಲದಲ್ಲಿ ಸುಮಾರು 10 ಸಾವಿರ ಮಂದಿಗೆ ನಾಟಿ ಕೋಳಿ ಭೋಜನ ಏರ್ಪಡಿಸಲಾಗಿದ್ದು, ವಿಜಯಪುರ, ಕಲಬುರಗಿ, ಹಾಸನ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಕ್ತದಾನ ಶಿಬಿರಗಳು ಮತ್ತು ಸಮಾವೇಶಗಳು ನಡೆಯುತ್ತಿವೆ.

‘ಸಾಮಾಜಿಕ ನ್ಯಾಯದ ನಾಯಕ’ ಎಂದು ಗುರುತಿಸಿಕೊಂಡಿದ್ದ ದೇವರಾಜ ಅರಸು ಅವರು ಎರಡು ಅವಧಿಯಲ್ಲಿ ಒಟ್ಟು 2,789 ದಿನಗಳು (7 ವರ್ಷ 239 ದಿನ) ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 1972ರ ಮಾರ್ಚ್ 20ರಿಂದ 1980ರ ಜನವರಿ 7ರವರೆಗೆ ಅವರು ಸತತ ಏಳು ವರ್ಷಕ್ಕಿಂತ ಹೆಚ್ಚು ಕಾಲ ಆಡಳಿತ ನಡೆಸಿದ್ದರು.


ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮೊದಲ ಅವಧಿಯಲ್ಲಿ 1,829 ದಿನಗಳು ಮುಖ್ಯಮಂತ್ರಿಯಾಗಿದ್ದರು. 2023ರ ಮೇ 20ರಿಂದ ಆರಂಭವಾದ ಎರಡನೇ ಅವಧಿಯೊಂದಿಗೆ ಅವರು ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಮುಖ್ಯಮಂತ್ರಿ ಅವಧಿಯನ್ನು ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಲೆಕ್ಕ ಹಾಕಲಾಗುತ್ತದೆ ಎಂದು ವಿಧಾನಸಭೆ ಸಚಿವಾಲಯದ ಮೂಲಗಳು ತಿಳಿಸಿವೆ.

ಅರಸು ಹಾಗೂ ಸಿದ್ದರಾಮಯ್ಯ ಇಬ್ಬರೂ ತಮ್ಮ ಸಂಘಟನಾ ಸಾಮರ್ಥ್ಯ, ರಾಜಕೀಯ ತಂತ್ರ ಮತ್ತು ಅಹಿಂದ (ಅಲ್ಪಸಂಖ್ಯಾತ–ಹಿಂದುಳಿದ–ದಲಿತ) ಸಮೀಕರಣದ ಮೂಲಕ ರಾಜ್ಯ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ. ಒಕ್ಕಲಿಗರು ಮತ್ತು ಲಿಂಗಾಯತರ ಪ್ರಾಬಲ್ಯದ ನಡುವೆಯೂ, ಈ ಸಮೀಕರಣವೇ ಇಬ್ಬರಿಗೂ ದೀರ್ಘಕಾಲ ಅಧಿಕಾರದಲ್ಲಿ ಉಳಿಯಲು ಸಹಾಯ ಮಾಡಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಕೋಮುವಾದ ವಿರೋಧಿ ನಿಲುವುಗಳನ್ನು ಸದಾ ಪ್ರತಿಪಾದಿಸಿರುವ ಸಿದ್ದರಾಮಯ್ಯ ಅವರು, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇತ್ತೀಚಿನ ಅವಧಿಯಲ್ಲಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಜನತಾಪಕ್ಷ, ಜನತಾದಳ ಮೂಲಕ ಆರಂಭವಾಗಿ 2006ರಿಂದ ಕಾಂಗ್ರೆಸ್‌ನಲ್ಲಿ ಮುಂದುವರಿದಿದೆ. ಕರ್ನಾಟಕದ ಇತಿಹಾಸದಲ್ಲಿ ದೀರ್ಘಕಾಲ ಮುಖ್ಯಮಂತ್ರಿ ಸ್ಥಾನದಲ್ಲಿದ್ದವರ ಪಟ್ಟಿಯಲ್ಲಿ ದೇವರಾಜ ಅರಸು ನಂತರ ಎಸ್. ನಿಜಲಿಂಗಪ್ಪ (7 ವರ್ಷ 175 ದಿನ), ರಾಮಕೃಷ್ಣ ಹೆಗಡೆ (5 ವರ್ಷ 216 ದಿನ) ಮತ್ತು ಬಿ.ಎಸ್. ಯಡಿಯೂರಪ್ಪ (5 ವರ್ಷ 82 ದಿನ) ಇದ್ದಾರೆ.ಇದನ್ನು ಓದಿ –ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: 24 ಗಂಟೆಗಳಲ್ಲಿ ಇಬ್ಬರ ಹತ್ಯೆ

ಅರಸುಗೆ ನನ್ನ ಹೋಲಿಕೆ ಇಲ್ಲ: ಸಿದ್ದರಾಮಯ್ಯ
ಮೈಸೂರು: ದೇವರಾಜ ಅರಸು ಅವರಿಗೂ ನನಗೂ ಹೋಲಿಕೆ ಇಲ್ಲ. ಆದರೆ ಇಬ್ಬರೂ ಒಂದೇ ಜಿಲ್ಲೆಯಿಂದ ಬಂದವರು. ಅವರು ಹೆಚ್ಚು ದಿನ ಆಡಳಿತ ನಡೆಸಿದ ದಾಖಲೆಯನ್ನು ನಾನು ಸರಿಗಟ್ಟುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ದಾಖಲೆಗಳು ಮುರಿಯಲ್ಪಡುವುದೇ ಇತಿಹಾಸದ ಭಾಗ. ಮುಂದೆಯೂ ಯಾರಾದರೂ ನನ್ನ ದಾಖಲೆಯನ್ನು ಮುರಿಯಬಹುದು ಎಂದು ಹೇಳಿದರು.

  • ಉಡುಗೊರೆ ಹೊರೆಯಾಗದಿರಲಿ
    by Team Varthaman
    May 16, 2026
  • ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    by Team Varthaman
    May 16, 2026
  • ಇಂಧನ ದರ ಏರಿಕೆ: ಖಾಸಗಿ ಬಸ್‌ ಪ್ರಯಾಣ ದರ ಹೆಚ್ಚಳ
    by Team Varthaman
    May 16, 2026
  • ಪೆಟ್ರೋಲ್‌, ಡೀಸೆಲ್ ದರ ಏರಿಕೆ ಹಿಂಪಡೆಯಲಿ: ಸಿದ್ದರಾಮಯ್ಯ
    by Team Varthaman
    May 16, 2026
  • ದರ್ಶನ್‌ಗೆ ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸಲು ಅವಕಾಶವಿಲ್ಲ
    by Team Varthaman
    May 15, 2026
ಕೆಂಪುಕೋಟೆ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ
ಬಣ್ಣದ ಬದುಕಿಗೂ ಇಹುದು ಕಷ್ಟ ಸುಖ(ಬ್ಯಾಂಕರ್ಸ್ ಡೈರಿ)
ಕೆಆರ್‌ಎಸ್‌ಗೆ ಮಳೆಯ ವರದಾನ – ಜಲಾನಯನ ಪ್ರದೇಶಗಳಿಂದ ಒಳಹರಿವು ಹೆಚ್ಚಳ
ಜನಸಾಗರದ ನಡುವೆ ಸುತ್ತೂರು ರಥೋತ್ಸವ 
ನಿರ್ಮಿತಿ ನಿರ್ದೇಶಕ ಮನೆ ಮೇಲೆ ಲೋಕಾಯುಕ್ತ ದಾಳಿ
TAGGED:breakingnewsDevraj UrsKarnataka CMlatestnewsSiddaramaiah
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಬೈಕ್‌ ಟ್ಯಾಕ್ಸಿ ಸೇವೆಯಿಂದ ಹಿಂದೆ ಸರಿದ ರಾಪಿಡೋ

Team Varthaman
Team Varthaman
June 16, 2025
ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ – ಜನರಲ್ಲಿ ಆತಂಕ
ಲೇಹ್- ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ
ಇಂದಿನಿಂದ 2025–26ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಯ ಅರ್ಧ ಕಳೆಬರ ಪತ್ತೆ – ಬೇಟೆ ಶಂಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?