By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
    “ರೈಟ್ ಟು ಡ್ರೈ”
    May 3, 2026
    ಸುಡುವ ಸೂರ್ಯನಿಗೊಂದು ಪತ್ರ
    May 3, 2026
  • Sports
  • National
  • International
  • Crime
Reading: ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕು – ಅಶೋಕ್
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕು – ಅಶೋಕ್
BengaluruKarnatakaPoliticsTrending

ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕು – ಅಶೋಕ್

Team Varthaman
Last updated: April 25, 2025 9:09 AM
Team Varthaman
Published: April 25, 2025
Share
SHARE

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್‌ 28 ರಿಂದ ಮೂರು ದಿನಗಳ ಕಾಲ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್‌ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್‌ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್‌ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು.

Join WhatsApp Group

ಗ್ರೇಟರ್‌ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರು ಸಹಿ ಹಾಕಿದರೆ ಅದು ಕಾಂಗ್ರೆಸ್‌ ಪರ ಎನ್ನುತ್ತಾರೆ, ಸಹಿ ಹಾಕದೇ ಇದ್ದರೆ ಅದು ಬಿಜೆಪಿ ಕಚೇರಿ ಎಂದು ಟೀಕಿಸುತ್ತಾರೆ ಎಂದರು.

ಕೆಎಎಸ್‌ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಅಧಿವೇಶನದಲ್ಲಿ ನಾನು ಈ ವಿಷಯ ಪ್ರಸ್ತಾಪಿಸಿದಾಗ ತೀರ್ಪು ಬಂದ ಮೇಲೆ ಮರು ಪರೀಕ್ಷೆ ಬಗ್ಗೆ ಮುಕ್ತ ಮನಸ್ಸಿನಿಂದ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಗಮನಿಸಿ ಮುಂದೆ ಅಗತ್ಯಬಿದ್ದರೆ ಮುಂದೆಯೂ ಹೋರಾಟ ಮಾಡಲಾಗುವುದು ಎಂದರು.

ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟವಾದಾಗ ಯಾರು ವಿಫಲರಾಗಿದ್ದರು? ಕುಕ್ಕರ್‌ ಬಾಂಬ್‌ ಸ್ಪೋಟಗೊಂಡಾಗ ಯಾರು ವಿಫಲರಾಗಿದ್ದರು? ಸಚಿವರ ವಿರುದ್ಧ ಹನಿಟ್ರ್ಯಾಪ್‌ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ? ಇಂತಹ ಕಾಂಗ್ರೆಸ್‌ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.ಇದನ್ನು ಓದಿ –ಯಾರೇ ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡೇ ಮಾಡ್ತೀವಿ: ಡಿಕೆಶಿ

ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ. ಅವರಿಗೆ ನೆರವು ಕೊಡುವುದು, ಬೇಲ್‌ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

  • ದೌರ್ಜನ್ಯ ಆರೋಪ: ವಚನಾನಂದ ಶ್ರೀ ವಿರುದ್ಧ ಪೋಕ್ಸೊ ಪ್ರಕರಣ
    by Team Varthaman
    May 13, 2026
  • ಹೃದಯಾಘಾತದಿಂದ ನಟ ದಿಲೀಪ್ ರಾಜ್ ನಿಧನ
    by Team Varthaman
    May 13, 2026
  • ರಾಜ್ಯದಲ್ಲಿ ಜಲಕಂಟಕ :ಕೋಡಿ ಶ್ರೀ ಭವಿಷ್ಯ
    by Team Varthaman
    May 12, 2026
  • ಕೆಪಿಎಸ್‌ಸಿ ಹಾಳಾಗಲು ಕಾಂಗ್ರೆಸ್ ಕಾರಣ – ಹೆಚ್.ಡಿ.ಕೆ
    by Team Varthaman
    May 12, 2026
  • ಅಕ್ರಮ ಆರೋಪ: NEET ಪರೀಕ್ಷೆ ರದ್ದು
    by Team Varthaman
    May 12, 2026
ಹಳ್ಳಕ್ಕೆ ಬಿದ್ದ KSRTC ಬಸ್‌ -ಸಬ್‌ ಇನ್ಸ್‌ಪೆಕ್ಟರ್ ದುರ್ಮರಣ
ಸಿಗರೇಟ್, ಬೀಡಿ, ಪಾನ್ ಮಸಾಲಾ ದುಬಾರಿ
ಮೈಸೂರು : ಚಾಮುಂಡಿ ಬೆಟ್ಟದ ಅರ್ಚಕ ನಿಧನ – ದೇವಿ ದರ್ಶನಕ್ಕೆ ನಿರ್ಬಂಧ
ಉಬರ್, ರಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿಯ ವಂಚನೆ ಆರೋಪ – FIR ದಾಖಲು
TAGGED:breakingnewsKarnataka GovtlatestnewsPoliticsR Ashok
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ರಾಜ್ಯದಲ್ಲಿ ಭಾರಿ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Team Varthaman
Team Varthaman
June 25, 2025
ಉಬರ್, ರಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ
ಅಮೆರಿಕದಲ್ಲಿ ಮಂಡ್ಯ ಮೂಲದ ಉದ್ಯಮಿ ಪತ್ನಿ ಮತ್ತು ಪುತ್ರನನ್ನು ಕೊಂದು ಆತ್ಮಹತ್ಯೆ
ಮೋದಿ ಕಪ್‌ ದೇಹದಾಡ್ಯ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ
ದೇಶದ 2ನೇ ಅತಿದೊಡ್ಡ ಕೇಬಲ್ ಸೇತುವೆ ‘ಸಿಗಂದೂರು ಸೇತುವೆ’ ಲೋಕಾರ್ಪಣೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?