ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣರನ್ನು ಸೈಬರ್ ಕ್ರೈಂ ಪೊಲೀಸರು ಸುಮಾರು 20 ಗಂಟೆಗಳ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಬಿಡುಗಡೆ ಮಾಡಿದ್ದಾರೆ.
ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ಮುಖ್ಯ ಕಾರ್ಯದರ್ಶಿಗೆ ಲಂಚ ನೀಡಿ ಮುಂಬಡ್ತಿ ಪಡೆದಿದ್ದಾರೆ ಎಂಬ ಆರೋಪ ಸಂಬಂಧಿತ ಆಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಈ ಬಗ್ಗೆ ನಟೇಶ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ, ಆಡಿಯೋ ಸೃಷ್ಟಿಸಿದ ಆರೋಪದಲ್ಲಿ ಮೈಸೂರು ಮೂಲದ ವಿನೋದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಿ ಪ್ರಶ್ನೋತ್ತರ ನಡೆಸಲಾಗಿತ್ತು.ಇದನ್ನು ಓದಿ –ಲೋಕಾಯುಕ್ತ ಬಲೆಗೆ ಶಾಸಕ ಚಂದ್ರು ಲಮಾಣಿ
ಆಡಿಯೋ ಮೂಲ, ಸೃಷ್ಟಿಸಿದ ವ್ಯಕ್ತಿ ಹಾಗೂ ಹರಡುವಿಕೆಯ ಕುರಿತು ವಿಚಾರಣೆ ನಡೆಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಆರೋಪಿ ವಿನೋದ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ತನಿಖೆಗೆ ಕಸ್ಟಡಿಗೆ ಪಡೆಯಲು ಸೈಬರ್ ಕ್ರೈಂ ಪೊಲೀಸರು ಮುಂದಾಗಿದ್ದಾರೆ.







