- ಸಿದ್ದರಾಮಯ್ಯ ಸೇರಿ ಇತರರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಸಂಬಂಧ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣವನ್ನು ಸಿಬಿಐ ಇಲ್ಲವೇ, ಇತರ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಕುರಿತಂತೆ ವಿಚಾರಣೆ ನಡೆಸಿತು.ಇದನ್ನು ಓದಿ –ನಮ್ಮ METRO ಕಾಮಗಾರಿ ನಿರ್ಲಕ್ಷ್ಯ: ಆಟೋ ಚಾಲಕನ ದಾರುಣ ಸಾವು
ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿತು.