- 2026-27 ಬಜೆಟ್ ಅನುಮೋದನೆಗೆ ಸಜ್ಜು
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ಗೆ ಅನುಮೋದನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಾರ್ಚ್ 6, 2026ರಂದು ಬೆಳಿಗ್ಗೆ 9:45ಕ್ಕೆ ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ.
ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಂಗಣದಲ್ಲಿ ಈ ಮಹತ್ವದ ಸಭೆ ಆಯೋಜಿಸಲಾಗಿದೆ. ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅಧಿಕೃತ ಸೂಚನೆ ನೀಡಿದ್ದಾರೆ.
ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಮುಂದಿನ ಸಾಲಿನ ಯೋಜನೆಗಳ ದೃಷ್ಟಿಯಿಂದ ಈ ಬಜೆಟ್ ಮಹತ್ವದ್ದಾಗಿದೆ. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯ ಪ್ರಸ್ತಾವನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗುತ್ತದೆ. ಸಭೆಗೆ ಎಲ್ಲಾ ಸಚಿವರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.ಇದನ್ನು ಓದಿ –ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಚಿಂತನೆ
ಸಭೆ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಭದ್ರತಾ ಹಾಗೂ ಆಡಳಿತಾತ್ಮಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬಜೆಟ್‌ಗೆ ಸಚಿವ ಸಂಪುಟದ ಮುದ್ರೆ ಬಿದ್ದ ಬಳಿಕ, ಸರ್ಕಾರವು ತನ್ನ ಆರ್ಥಿಕ ಗುರಿಗಳನ್ನು ಸದನದ ಮುಂದೆ ಮಂಡಿಸಲಿದೆ.








