- ಒಟ್ಟು ಉತ್ತೀರ್ಣ ಶೇಕಡಾವಾರು 66.14%
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 2) SSLC ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಒಟ್ಟು ಶೇ. 66.14 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ 91.12% ಶೇಕಡಾ ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಇತ್ತ ಕಲಬುರಗಿ ಜಿಲ್ಲೆ ಕೇವಲ 42.43% ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿ ಉಳಿದಿದೆ.
ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಬೆಳಿಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ವೀಕ್ಷಿಸಬಹುದು.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಅವರು 625ಕ್ಕೇ 625 ಅಂಕಗಳನ್ನು ಗಳಿಸುವ ಮೂಲಕ ಶ್ರೇಷ್ಠ ಸಾಧನೆ ಮಾಡಿದ್ದಾರೆ.
2025ರ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆದಿದ್ದು, ಈ ಅವಧಿಯಲ್ಲಿ ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ 4,61,563 ಮಂದಿ ಹುಡುಗರು ಹಾಗೂ 4,34,884 ಮಂದಿ ಹುಡುಗಿಯರು ಪ್ರೌಢಶಾಲೆಗಳಿಂದ ಪರೀಕ್ಷೆಗೆ ಹಾಜರಾದರು.
ಹಿಂದಿನ ವರ್ಷಗಳ ಫಲಿತಾಂಶಗಳೊಂದಿಗೆ ಹೋಲಿಕೆ ಮಾಡಿದರೆ, 2024ರಲ್ಲಿ ಉತ್ತೀರ್ಣ ಶೇಕಡಾವಾರು 73.40% ಇತ್ತು, 2023ರಲ್ಲಿ ಇದು 83.89% ಹಾಗೂ 2022ರಲ್ಲಿ 85.13% ಇತ್ತು. ಈ ಹಿನ್ನೆಲೆಯಲ್ಲಿ ಈ ವರ್ಷದ ಫಲಿತಾಂಶದಲ್ಲಿ ಸ್ಪಷ್ಟವಾಗಿ ಇಳಿಕೆಯಾಗಿರುವುದು ಗಮನಾರ್ಹವಾಗಿದೆ.ಇದನ್ನು ಓದಿ –ಸತತ 8ನೇ ದಿನ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ – ಭಾರತೀಯ ಸೇನೆಯ ತೀವ್ರ ಪ್ರತಿಕ್ರಿಯೆ
ಶಿಕ್ಷಣ ಇಲಾಖೆಯು ಮುಂದಿನ ದಿನಗಳಲ್ಲಿ ಫಲಿತಾಂಶದ ಕುರಿತು ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.