ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈ ಪ್ರಕರಣದಲ್ಲಿ ನಾಲ್ವರು RCB ಆಯೋಜಕರನ್ನು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಆಯೋಜಕರಾದ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಹಾಗೂ ಸುಮಂತ್ ಅವರನ್ನು ಬಂಧಿಸಲಾಗಿದೆ.
ಈ ಹಿಂದೆ, ಐಪಿಎಲ್ 2024 ಪಂದ್ಯಾವಳಿಯಲ್ಲಿ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ನಡೆದ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ದುರಂತವಾಗಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಆರ್ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಪೊಲೀಸರು ಪ್ರಕರಣದಲ್ಲಿ ಮುಖ್ಯ ಆರೋಪಿಗಳೆಂದು ಮೂರು ಘಟಕಗಳನ್ನು ಗುರುತಿಸಿದ್ದು:
- ಎ1 – ಆರ್ಸಿಬಿ ಮ್ಯಾನೇಜ್ಮೆಂಟ್
- ಎ2 – ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ
- ಎ3 – ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA)
ಇದನ್ನು ಓದಿ –ಬೆಂಗಳೂರು ಪೋಲೀಸ್ ಕಮೀಷನರ್ ಅಮಾನತ್ತು: ಆರ್ ಸಿಬಿ ವಿರುದ್ಧ ಕ್ರಮ
ಈ ಪ್ರಕರಣವನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳು 105, 115 ಮತ್ತು 118ರ ಅಡಿಯಲ್ಲಿ ದಾಖಲಿಸಲಾಗಿದೆ. ಘಟನೆಗೆ ಕಾರಣವಾದ ನಿರ್ಲಕ್ಷ್ಯ ಹಾಗೂ ಆಡಳಿತದ ದೋಷದ ಬಗ್ಗೆ ತನಿಖೆ ಮುಂದುವರೆದಿದೆ.