ಬೆಂಗಳೂರು: ರಾಜ್ಯ ಸರ್ಕಾರದ ಬಜೆಟ್‌ನ್ನು ಮಾರ್ಚ್ ತಿಂಗಳಲ್ಲಿ ಮಂಡಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಪೂರ್ವಭಾವಿ ಸಭೆ ವಿಳಂಬವಾಗಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿ, ಫೆಬ್ರವರಿಯಲ್ಲಿ ಪೂರ್ವಭಾವಿ ಸಭೆಗಳು ನಡೆಯಲಿದ್ದು, ನಂತರ ಮಾರ್ಚ್‌ನಲ್ಲಿ ಬಜೆಟ್ ಮಂಡನೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಬಳ್ಳಾರಿಯಲ್ಲಿ ನಡೆದ ಗಲಾಟೆ ಕುರಿತು ಮಾತನಾಡಿದ ಸಚಿವರು, ಬ್ಯಾನರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿ ಗಲಾಟೆ ಉಂಟಾಗಿ ಫೈರಿಂಗ್ ನಡೆದಿದೆ. ಘಟನೆಯ ಸತ್ಯಾಸತ್ಯತೆ ತನಿಖೆಯಿಂದಲೇ ಗೊತ್ತಾಗಲಿದೆ. ಯಾರು, ಏಕೆ ಗಲಾಟೆ ನಡೆಸಿದರು ಎಂಬುದು ತನಿಖೆಯ ನಂತರ ಸ್ಪಷ್ಟವಾಗುತ್ತದೆ ಎಂದು ಹೇಳಿದರು.ಇದನ್ನು ಓದಿ –ಸಿಗರೇಟ್, ಬೀಡಿ, ಪಾನ್ ಮಸಾಲಾ ದುಬಾರಿ
ಬಜೆಟ್ ಬಗ್ಗೆ ಸಿಎಂ ಪ್ರತಿಕ್ರಿಯೆ
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ತಿಂಗಳಿನಿಂದಲೇ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದರು. ಎಲ್ಲಾ ಇಲಾಖೆಗಳೊಂದಿಗೆ ಸಭೆ ನಡೆಸಿ, ಇಲಾಖಾವಾರು ಅಗತ್ಯ ಅನುದಾನ, ಬೇಡಿಕೆಗಳು ಹಾಗೂ ಯೋಜನೆಗಳ ಕುರಿತು ಚರ್ಚಿಸಲಾಗುತ್ತದೆ. ಈ ಪೂರ್ವಭಾವಿ ಸಭೆಗಳೊಂದಿಗೆ ಬಜೆಟ್ ಮಂಡನೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಗಲಿದೆ ಎಂದು ಸಿಎಂ ಹೇಳಿದರು.








