ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯನ್ನು ಏಪ್ರಿಲ್ 16ರಂದು ನಡೆಸಲು ನಿಗದಿಪಡಿಸಲಾಗಿದೆ. ಅಂದು ಸಂಜೆ 4:30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಈ ಸಭೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ಸಿಗುವ ಸಾಧ್ಯತೆಯಿದೆ.
ಸರ್ಕಾರದ ಅಪರ ಕಾರ್ಯದರ್ಶಿ ಆರ್. ಚಂದ್ರಶೇಖರ್ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸಭೆಯ ಕಾರ್ಯಸೂಚಿಯನ್ನು ಶೀಘ್ರದಲ್ಲೇ ಸಚಿವರಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.ಇದನ್ನು ಓದಿ –ಕೋಶ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಈ ಸಭೆಯಲ್ಲಿ ಕೈಗೊಳ್ಳಲಾಗುವ ತೀರ್ಮಾನಗಳ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.








