ಬೆಂಗಳೂರು: ರಾಜ್ಯದಲ್ಲಿ ಹೊಸ ರಾಜ್ಯ ಶಿಕ್ಷಣ ನೀತಿ (SEP) ಯನ್ನು 2025–26ನೇ ಶೈಕ್ಷಣಿಕ ವರ್ಷದಿಂದಲೇ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದು, ಈ ಸಂಬಂಧ ಚರ್ಚೆಗಳು ನಡೆಯುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SEP ವರದಿ ಈಗಾಗಲೇ ಸಿದ್ಧವಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಮಧ್ಯಂತರ ವರದಿಯ ಶಿಫಾರಸ್ಸಿನಂತೆ, ಪದವಿ ಕೋರ್ಸ್‌ಗಳನ್ನು 4 ವರ್ಷಗಳಿಂದ 3 ವರ್ಷಗಳಿಗೆ ಕಡಿತಗೊಳಿಸಲಾಗಿದೆ. SEP ವರದಿ ಪ್ರಸ್ತುತ ಇಂಗ್ಲಿಷ್‌ನಲ್ಲಿ ತಯಾರಾಗಿದ್ದು, ಕನ್ನಡಕ್ಕೆ ನಿಖರವಾಗಿ ಅನುವಾದ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅನುವಾದದ ವೇಳೆ ನಿಖರತೆ ಕಾಪಾಡಬೇಕಿರುವುದರಿಂದ ಆಯೋಗದಿಂದ ಕೆಲವೊಂದು ಹೆಚ್ಚುವರಿ ಸಮಯ ಕೇಳಲಾಗಿದೆ.ಇದನ್ನು ಓದಿ –ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಐವರು ಸ್ಥಿತಿ ಗಂಭೀರ
ಈ ವರದಿಯ ಅಂತಿಮ ರೂಪವನ್ನು ಈ ತಿಂಗಳ ಕೊನೆಯ ವಾರದೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.