By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ 
    February 26, 2026
    ಸರ್ವರೋಗ ನಿವಾರಿಣಿ ಬಿಲ್ವಪತ್ರೆ
    February 22, 2026
    ಮಕ್ಕಳು ತಾಯಿಯ ಪ್ರತಿಬಿಂಬ 
    February 20, 2026
    ಮಕ್ಕಳ ಬಾಲ್ಯ
    February 15, 2026
    “ಅರಿವಿನೊಂದಿಗೆ ಶಿವರಾತ್ರಿ”
    February 15, 2026
  • Sports
  • National
  • International
  • Crime
Reading: ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ – ಸಚಿವ ಖಂಡ್ರೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ – ಸಚಿವ ಖಂಡ್ರೆ
BengaluruKarnataka

ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ – ಸಚಿವ ಖಂಡ್ರೆ

Team Varthaman
Last updated: February 26, 2026 5:11 PM
Team Varthaman
Published: February 26, 2026
Share
SHARE

ಬೆಂಗಳೂರು: ನಗರದಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗಾಳಿಯ ಗುಣಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿಯುತ್ತಿದೆ. ಬೆಂಗಳೂರು “ಗ್ಯಾಸ್ ಚೇಂಬರ್” ಆಗದಂತೆ ತಡೆಗಟ್ಟಲು ನಗರದ ಎಲ್ಲಾ 28 ಶಾಸಕರೊಂದಿಗೆ ಶೀಘ್ರ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಅವರ ಮನವಿಯ ಮೇರೆಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಸಚಿವರು ಮಾತನಾಡಿದರು. ನಗರದಲ್ಲಿ ವಾಯು, ಜಲ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿರುವುದು ಗಂಭೀರ ವಿಷಯ. ಸಮಸ್ಯೆ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರ ಅಗತ್ಯವೆಂದು ಹೇಳಿದರು.

ರಸ್ತೆ ಧೂಳು ವಾಯು ಗುಣಮಟ್ಟ ಹದಗೆಡಲು ಪ್ರಮುಖ ಕಾರಣವಾಗಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆಗಳು ಹೆಚ್ಚುತ್ತಿವೆ ಎಂದು ಸುರೇಶ್ ಕುಮಾರ್ ಗಮನಸೆಳೆದರು. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

Join WhatsApp Group

ನಗರದಲ್ಲಿ 11 ಸ್ಥಿರ ಹಾಗೂ 13 ಸಂಚಾರಿ ಘಟಕಗಳ ಮೂಲಕ ವಾಯು ಗುಣಮಟ್ಟದ ಮೇಲ್ವಿಚಾರಣೆ ನಡೆಯುತ್ತಿದೆ. ಏರ್ ಕ್ವಾಲಿಟಿ ಇಂಡೆಕ್ಸ್ (AQI) 100 ಮೀರಿದಲ್ಲಿ ಸಂಬಂಧಿತ ಸ್ಥಳೀಯ ಸಂಸ್ಥೆಗೆ ನೋಟಿಸ್ ನೀಡಬೇಕು. ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳದಿದ್ದರೆ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಉದ್ಯಾನ ನಗರಿ ಎಂಬ ಹೆಗ್ಗಳಿಕೆ ಹೊಂದಿದ್ದ ಬೆಂಗಳೂರಿನಲ್ಲಿ ತಾಪಮಾನ ಏರಿಕೆಗೆ ಹವಾಮಾನ ಬದಲಾವಣೆ ಹಾಗೂ ಹಸಿರು ಹೊದಿಕೆ ಕುಸಿತ ಕಾರಣವಾಗಿದೆ. ಹಸಿರು ವಿಸ್ತರಣೆಗೆ ಕ್ರಮ ಕೈಗೊಂಡು ವಾಯು ಗುಣಮಟ್ಟ ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕಾಗಿ ಸ್ಥಳೀಯ ಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ದಳ ರಚಿಸಲು ಸೂಚಿಸಲಾಗಿದೆ. ರಾಜ್ಯದ ತ್ಯಾಜ್ಯ ಶುದ್ಧೀಕರಣ ಘಟಕಗಳ ಸಾಮರ್ಥ್ಯ, ಕಾರ್ಯಕ್ಷಮತೆ ಹಾಗೂ ಸಂಸ್ಕರಿಸದೆ ಜಲಮೂಲಗಳಿಗೆ ಸೇರುತ್ತಿರುವ ಮಲಿನ ನೀರಿನ ವಿವರಗಳನ್ನು ಪರಿಶೀಲಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಪರಿಸರ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ–ವಿಜಯ್ ಜೋಡಿ
    by Team Varthaman
  • ಏ. 1ರಿಂದ ಇ20 ಪೆಟ್ರೋಲ್ ಕಡ್ಡಾಯ
    by Team Varthaman
  • ಫೆ.28ರಂದು ಉಚಿತ HPV ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ
    by Team Varthaman
  • ಬಲ್ಡೋಟಾಗೆ ಕೇಂದ್ರ ಅನುಮತಿ: ಎಂ.ಬಿ. ಪಾಟೀಲ್
    by Team Varthaman
  • ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ – ಸಚಿವ ಖಂಡ್ರೆ
    by Team Varthaman
ತಿರುಪತಿ ಹುಂಡಿ ಹಣ ಲೂಟಿ: 100 ಕೋಟಿಗೂ ಅಧಿಕ ಮೊತ್ತ ಕಳ್ಳತನ, CCTVಯಲ್ಲಿ ಸೆರೆ
ಮಡಿಕೇರಿ ಬಳಿ ಕಾರು-ಲಾರಿ ಡಿಕ್ಕಿ: ನಾಲ್ವರು ಯುವಕರು ದುರ್ಮರಣ
ಹಳ್ಳಕ್ಕೆ ಬಿದ್ದ KSRTC ಬಸ್‌ -ಸಬ್‌ ಇನ್ಸ್‌ಪೆಕ್ಟರ್ ದುರ್ಮರಣ
ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು
ಜಿ.ಬಿ.ಎ ಚುನಾವಣೆ : ಜೂ.30ರೊಳಗೆ ನಡೆಸಲು ಸುಪ್ರೀಂ ಆದೇಶ
TAGGED:breakingnewsEshwar Khandrelatestnewspollutionಮಾಲಿನ್ಯ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BelgaviKarnatakaTrending

ಆಟವಾಡುತ್ತಿದ್ದಾಗ ಹೃದಯಾಘಾತ: 9ನೇ ತರಗತಿಯ ವಿದ್ಯಾರ್ಥಿನಿ ದುರ್ಮರಣ

Team Varthaman
Team Varthaman
June 25, 2025
ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಕುರಿತು ಇಂದು ವಿಶ್ವಸಂಸ್ಥೆಯಲ್ಲಿ ಮಹತ್ವದ ಸಭೆ
ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ
ಹೊಸೂರು ರಸ್ತೆಯ ಟೋಲ್ ದರ ಏರಿಕೆ
ಖಾಸಗಿ ಹೆಲಿಕಾಪ್ಟರ್ ಪತನ: ಐವರು ದುರ್ಮರಣ, ಇಬ್ಬರು ಗಾಯಾಳು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?