ನವದೆಹಲಿ: ನಟ ದರ್ಶನ್ ಅವರಿಗೆ ಜೈಲಿನಲ್ಲಿ ಸಮರ್ಪಕ ಮೂಲಸೌಕರ್ಯ ಒದಗಿಸಲಾಗಿದೆವೇ ಎಂಬ ಕುರಿತು ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿಲ್ಲ, ಅವರನ್ನು ಬೆಳಕು ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ವಾದಿಸಿದರು.
ಈ ಸಂಬಂಧ, ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಅವರ ನೇತೃತ್ವದ ಪೀಠವು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಜೊತೆಗೆ, ಪ್ರಕರಣದಲ್ಲಿನ ಸಾಕ್ಷಿಗಳ ವಿಚಾರಣೆ ಪ್ರಗತಿ ಕುರಿತು ವಿವರವಾದ ವರದಿ ಸಲ್ಲಿಸಲು ವಿಚಾರಣಾ ನ್ಯಾಯಾಲಯಕ್ಕೂ ನಿರ್ದೇಶನ ನೀಡಲಾಗಿದೆ.








