ಮುಂಬೈ: ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದೇವಿಶಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಸಂತಸದ ಸುದ್ದಿಯನ್ನು ಸೂರ್ಯಕುಮಾರ್ ಯಾದವ್ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ.
“ನಗು ಮತ್ತು ಕನಸುಗಳೊಂದಿಗೆ ನಮ್ಮ ಜೀವನಕ್ಕೆ ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ” ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಸುಮಾರು 10 ವರ್ಷಗಳ ಬಳಿಕ ದಂಪತಿ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ
ಈ ಸುದ್ದಿ ತಿಳಿದ ತಕ್ಷಣ ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.








