ದುಬೈ: ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವನ್ನು ಜಯದತ್ತ ಮುನ್ನಡೆಸಿದ ನಾಯಕ ಸೂರ್ಯಕುಮಾರ್ ಯಾದವ್ ಅವರು ಮಾನವೀಯತೆ ಮೆರೆದಿದ್ದಾರೆ.
ಟೂರ್ನಿಯಿಂದ ಪಡೆದ ತಮ್ಮ ಸಂಪೂರ್ಣ ಪಂದ್ಯದ ಶುಲ್ಕವನ್ನು ದೇಶದ ಸಶಸ್ತ್ರ ಪಡೆಗಳು ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದವರ ಕುಟುಂಬಗಳಿಗೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು ತನ್ನ ಶಾಶ್ವತ ಎದುರಾಳಿ ಪಾಕಿಸ್ತಾನವನ್ನು ಐದು ವಿಕೆಟ್ ಅಂತರದಲ್ಲಿ ಮಣಿಸಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿತು. ಈ ಹೈವೋಲ್ಟೇಜ್ ಗೆಲುವಿನ ನಂತರ, 35 ವರ್ಷದ ಯಾದವ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ತಮ್ಮ ಭಾವನೆ ಹಂಚಿಕೊಂಡು, “ನನ್ನ ಪಂದ್ಯ ಶುಲ್ಕವನ್ನು ಸಶಸ್ತ್ರ ಪಡೆಗಳು ಮತ್ತು ಪಹಲ್ಗಾಮ್ ದಾಳಿಯ ಸಂತ್ರಸ್ತ ಕುಟುಂಬಗಳ ಬೆಂಬಲಕ್ಕಾಗಿ ದಾನ ಮಾಡಲು ನಿರ್ಧರಿಸಿದ್ದೇನೆ.
ನೀವು ಯಾವಾಗಲೂ ನನ್ನ ಹೃದಯದಲ್ಲಿ ಮತ್ತು ಆಲೋಚನೆಗಳಲ್ಲಿ ಇರುತ್ತೀರಿ. ಜೈ ಹಿಂದ್ ಎಂದು ಬರೆದಿದ್ದಾರೆ.ಇದನ್ನು ಓದಿ –ಚಾಂಪಿಯನ್ ಭಾರತಕ್ಕೆ ಬಿಸಿಸಿಐ 21 ಕೋಟಿ ಘೋಷಣೆ
ಅವರ ಈ ಘೋಷಣೆಗೆ ಅಭಿಮಾನಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.








