ರಾಮಾನುಜಾಚಾರ್ಯರು
ಭಾರತೀಯ ದರ್ಶನ ಶಾಸ್ತ್ರದಲ್ಲಿ ಸನಾತನ ಧರ್ಮದ ಪ್ರತೀಕವಾದ ದ್ವೈತ, ಅದ್ವೈತ ಮತ್ತು ವಿಶಿಷ್ಟಾದ್ವೈತಗಳು ಬಹಳ ಪ್ರಮುಖ…
ಶಂಕರ ಪಂಚಮಿ : ನಮಾಮಿ ಲೋಕ ಶಂಕರಂ
ಅಹಂ ಬ್ರಹ್ಮಾಸ್ಮಿ ,ನಾನು ಬ್ರಹ್ಮ ,ನೀನೂ ಬ್ರಹ್ಮ ಈ ಜಗತ್ತಿನ ಸರ್ವಸೃಷ್ಟಿಯೂ ಬ್ರಹ್ಮನದೇ ನಾನು ಬೇರೆಯಲ್ಲ…
ಆಚಾರ್ಯಶಂಕರರೆಂಬ ಭಾಷ್ಯಕೇಸರಿ
ಜಗತ್ತಿನ ಬಹುತೇಕ ಎಲ್ಲ ನಾಗರಿಕತೆಗಳೂ ‘ಸತ್ಯ ಏನು?’ ಎನ್ನುವ ಪ್ರಶ್ನೆಗೆ ಉತ್ತರವನ್ನು ಹುಡುಕಹೊರಡುತ್ತವೆ. ‘ನಾನು ಯಾರು?’,…
ಶೋಷಣೆಯ ಮತ್ತೊಂದು ಮುಖ
ಆಕೆ ಸಮಾಜದ ಅತ್ಯಂತ ಕೆಳ ವರ್ಗದಲ್ಲಿ ಜನಿಸಿದ ಹೆಣ್ಣುಮಗಳು. ಮೂರು ಜನ ತಂಗಿಯರು,ಇಬ್ಬರು ತಮ್ಮಂದಿರನ್ನು ಹೊಂದಿದ…
(ಬ್ಯಾಂಕರ್ಸ್ ಡೈರಿ)
ನಾವು ಮಕ್ಕಳನ್ನು ಹೇಗೆ ಬೆಳೆಸುತ್ತಿದ್ದೇವೆ? ಅಂದು ಸರಿ ಸುಮಾರು ಮಧ್ಯಾಹ್ನ 12:00 ಆಗಿತ್ತು. ಮಟಮಟ ಮಧ್ಯಾಹ್ನ ಉರಿಬಿಸಿಲು ಬೇರೆ. ರಮೇಶ್ (ಹೆಸರು ಬದಲಿಸಲಾಗಿದೆ) ಬಂದವರೇ “ಮೇಡಂ ಏನೋ ಹೇಳಬೇಕಿತ್ತು” ಎಂದರು. ಆದರೆ ಅವರ ಧ್ವನಿ ಮಾಮೂಲಿನಂತೆ ಇರಲಿಲ್ಲ. ”ಏನಾಯ್ತು ಸರ್ ಯಾಕೆ ಡಲ್ಲಾಗಿದ್ದೀರಾ?” ಎಂದು ಕೇಳಿದೆ . ಒಂದು ಕ್ಷಣ ಆತ ಸುತ್ತ ಮುತ್ತ ನೋಡಿದರು. ಪರಿಚಯದವರು ಯಾರಾದರೂ ಇದ್ದಾರೆಯೇ ಎನ್ನುವಂತೆ. “ಪರವಾಗಿಲ್ಲ ಮೇಡಂ ಇನ್ನು ಸ್ವಲ್ಪ ಹೊತ್ತು ಆಗಲಿ, ನಿಮ್ಮ ಕೆಲಸ ಮಾಡಿಕೊಳ್ಳಿ, ಆಮೇಲೆ ಹೇಳುತ್ತೇನೆ” ಎಂದರು . ನನಗೆ ಸೂಕ್ಷ್ಮತೆ ತಿಳಿಯಿತು. ಬಹುಶಃ ಬೇರೆ ಯಾರಿಗೂ ತಿಳಿಯದಂತಹ ಯಾವುದೋ ವಿಚಾರ ಹೇಳಲು ಇರಬಹುದು ಎಂದು. ಸರಿ ನಾಲ್ಕಾರು ಜನ ಹೋದ ಮೇಲೆ ಹತ್ತಿರ ಬಂದು “ಮೇಡಂ ನನ್ನ ಅಕೌಂಟಿನಿಂದ ದಿನ 200, 300, 400 ಹೋಗುತ್ತಿದೆ” ಎಂದರು . “ಹೌದಾ ಯಾರು ಅಕೌಂಟಿಗೆ ಹೋಗುತ್ತಿದೆ ನೋಡೋಣ. ನಿಮ್ಮ ಅಕೌಂಟ್ ನಂಬರ್ ಕೊಡಿ” ಎಂದು ಕೇಳಿ ಅವರ ಅಕೌಂಟ್ ಡೀಟೇಲ್ಸ್ ನೋಡಿದಾಗ ಹಣ ಅವರ ಮಗನ ಖಾತೆಗೆ ಹೋಗುತ್ತಿತ್ತು . “ನಿಮ್ಮ ಮಗನ ಖಾತೆಗೆ ಹೋಗುತ್ತಿದೆಯಲ್ಲಾ” ಎಂದೆ. “ನನಗೂ ಅದೇ ಹೆಸರು ಬಂದಿದೆ ಆದರೆ ಮಗ ಹೇಳುತ್ತಿದ್ದಾನೆ ನನ್ನ ಖಾತೆಗೆ ಬಂದಿಲ್ಲಪ್ಪ ಎಂದು. ಅವನ ಫೋನ್ ಪೇ ಹಿಸ್ಟರಿ ಕೂಡ ತೋರಿಸಿದ. ಅದರಲ್ಲೂ ಕೂಡ ಅವನಿಗೆ ಯಾವುದೇ ಜಮೆ ಆಗಿಲ್ಲ” ಎಂದರು. ಈ ಹಿಂದೆ ನನ್ನ ಗೆಳತಿಯ ಮಗನೇ ಅಪ್ಪನ ಫೋನ್ ಪೇ ಇಂದ ಆಗಾಗ ಹಣ ವರ್ಗಾಯಿಸಿಕೊಂಡು ಹಿಸ್ಟರಿ ಡಿಲೀಟ್ ಮಾಡಿ ನೋಡೀಪ್ಪಾ ನನ್ನ ಖಾತೆಗೆ ಹಣ ಬಂದೇ ಇಲ್ಲ ಎಂದಿದ್ದು, ಅವನ ಖಾತೆ ಬೇರೆ ಬ್ಯಾಂಕಿನಲ್ಲಿದ್ದು ಅಲ್ಲಿ ಚೆಕ್ ಮಾಡಿದಾಗ ಹಣ ಅವನಿಗೇ ಹೋಗಿದ್ದು, ನನ್ನ ಗೆಳತಿಯ ಗಂಡ ನಮ್ಮಲ್ಲೇ ತಮ್ಮ ಫೋನ್ ಪೇ ಲಾಕ್ ಮಾಡಿಸಿ ಮೇಡಂ ಈ ವಿಷಯ ನಿಮ್ಮಲ್ಲೇ ಇರಲಿ. ಇರುವುದೊಬ್ಬನೇ ಮಗ ನಾವು ಏನಾದರು ಹೆಚ್ಚು ಕೇಳಿ, ಆತ ಹೆದರಿ ಅಥವಾ ನಾಚಿ ಆತ್ಮಹತ್ಯೆ ಮಾಡಿಕೊಂಡರೆ ಏನು ಮಾಡುವುದು ಮೆಲ್ಲನೆ ಬ್ಲಾಕ್ ಮಾಡಿಸಿ ಏನೂ ಗೊತ್ತಾಗದ ಹಾಗೆ ಇದ್ದುಬಿಡುತ್ತೇನೆ ಎಂದದ್ದು ನನ್ನ ನೆನಪಿಗೆ ಬಂದಿತು. “ಸರ್ ಒಮ್ಮೆ ಮನೆಯಲ್ಲಿ ವಿಚಾರಿಸಿ ನೋಡಿ: ಎಂದೆ. ಇದಾಗಿ ಒಂದು ವಾರಕ್ಕೆ ಮತ್ತೆ ಆತ ಬಂದರು. “ಮೇಡಂ ಈಗಲೂ ದಿನ ನನ್ನ ಖಾತೆಯಿಂದ ನನ್ನ ಮಗನ ಹೆಸರಿಗೆ ಹೋಗುತ್ತಿದೆ. ಏನು ಮಾಡಲಿ ಮನೆಯಲ್ಲಿ ಜೋರಾಗಿ ಕೇಳಿದರೆ ಎಲ್ಲಿ ಅವನು ನೊಂದುಕೊಳ್ಳುತ್ತಾನೋ ಎನ್ನುವ ಭಯ” ಎಂದರು. “ ಸರಿ ಯುಪಿಐ ಬ್ಲಾಕ್ ಮಾಡಿಬಿಡಿ ಸರ್” ಎಂದೆ. ಆತ ಅರ್ಜಿ ಕೊಟ್ಟರು. ನಾವು ಯುಪಿಐ ಬ್ಲಾಕ್ ಮಾಡಿದ್ದೆವು. “ಇನ್ನು ಮೇಲಿನ ಭಯ ಇಲ್ಲ. ನಿಮ್ಮ ಖಾತೆಯಿಂದ ಫೋನ್ ಪೇ ಗೂಗಲ್ ಪೇ ಯಾವುದು ಆಗುವುದಿಲ್ಲ ಆರಾಮವಾಗಿರಿ” ಎಂದೆ.…
ಅಂಪೈರ್ ಮೇಡಂ
ಕಥೆಗಾರರೂ ಕಾದಂಬರಿಕಾರರೂ ಆದ ಶ್ರೀ ಕೆ ಸತ್ಯನಾರಾಯಣ ಅವರು ಬದುಕನ್ನು ನೋಡುವ ರೀತಿಯೇ ವಿಭಿನ್ನವಾಗಿದೆ ಮತ್ತು…
ಬಂದದ್ದೆಲ್ಲ ಬರಲಿ…. ಭಗವಂತನ ದಯೆ ಒಂದಿರಲಿ
ಇದೊಂದು ಚೀನಿ ಕಥೆ. ಓರ್ವ ರೈತ ಕುದುರೆ ಯೊಂದನ್ನು ಸಾಕಿದ್ದ. ಒಂದು ದಿನ ಆತನ ಕುದುರೆ…
ಹೆಣ್ಣು ಮಕ್ಕಳ ವ್ಯಥೆ
(ಬ್ಯಾಂಕರ್ಸ್ ಡೈರಿ) ಏಕೋ ಏನೋ ಇತ್ತೀಚಿಗೆ ಮಾತುಗಳೆಲ್ಲ ಹೆಣ್ಣು ಮಕ್ಕಳ ಸುತ್ತಲೇ ಸುತ್ತುತ್ತಿವೆ. ಬಹುಶಃ ಮಹಿಳಾ…
ಹತ್ತೂರಿನ ಸುಗ್ಗಿ ನೋಡುವ ಮೊದಲು ಹೆತ್ತೂರಿನ ಸುಗ್ಗಿ ನೋಡು
ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಹೆತ್ತೂರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿದೆ,ಸಕಲೇಶಪುರದಿಂದ 26 ಕೀಲೂ ಮೀಟರ್ ಪ್ರಯಾಣ ಮಾಡಿದರೆ…
ಹಕ್ಕಿಯ ಅಟೆಂಡೆನ್ಸ್ – ಎಸ್ ಮಿಸ್
ಡಾ. ಲೀಲಾ ಅಪ್ಪಾಜಿ ಎಂದರೆ ಅಗಾಧ ಶಿಷ್ಯರ ನಡುವಿನ ಒಬ್ಬ ಪ್ರೀತಿಸುವ ಹೃದಯದ ಗುರು ಶಿಷ್ಯರನ್ನು…