ಬೆಂಗಳೂರು: ಟ್ರಾನ್ಸ್‌ಫರ್ ಡೆವಲಪ್ಮೆಂಟ್ ರೈಟ್ಸ್ (ಟಿಡಿಆರ್) ಹಗರಣ ಸಂಬಂಧ, ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಂಗಳೂರು ನಗರದಲ್ಲಿ ಒಟ್ಟು 9 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ, 2002 (PMLA) ಅಡಿಯಲ್ಲಿ ನಡೆಯುತ್ತಿದೆ.
ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿರುವ ಕಂಪನಿಯ ಕಚೇರಿ ಹಾಗೂ ಕಂಪನಿ ನಿರ್ದೇಶಕರ ನಿವಾಸ ಸೇರಿ 9 ಕಡೆಗಳಲ್ಲಿ ದಾಳಿ ನಡೆದಿದ್ದು, ಇಡಿ ಅಧಿಕಾರಿಗಳು ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಹಿಂದೆಯೇ ಟಿಡಿಆರ್ ಹಗರಣದ ಕುರಿತಂತೆ ಜೆಸಿಬಿ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಇದೀಗ ಆ ತನಿಖೆಯ ಭಾಗವಾಗಿ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನು ಓದಿ – ಮೇ 24 ರಂದು ಸಿಇಟಿ ಫಲಿತಾಂಶ ಪ್ರಕಟ
ಹಗರಣದಲ್ಲಿ ಹಣದ ವರ್ಗಾವಣೆ ಮತ್ತು ಅಕ್ರಮ ಆಸ್ತಿ ಲಾಭಗಳ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.