ರಾಯಚೂರು: ಮಂತ್ರಾಲಯ ಸೇರಿದಂತೆ ದೇಶ-ವಿದೇಶಗಳ ರಾಯರ ಮಠಗಳಲ್ಲಿ ಗುರುರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವಕ್ಕೆ ಇಂದು (ಆ.8) ವಿಜೃಂಭಣೆಯಿಂದ ಚಾಲನೆ ದೊರೆಯಲಿದೆ. ಆ.8ರಿಂದ 14ರವರೆಗೆ ಏಳು ದಿನಗಳ ಕಾಲ ಸಪ್ತರಾತ್ರೋತ್ಸವ ಜರುಗಲಿದೆ.
ಇಂದು ಸಂಜೆ ಧ್ವಜಾರೋಹಣದೊಂದಿಗೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಗೋ, ಗಜ, ಅಶ್ವ, ಧಾನ್ಯ ಹಾಗೂ ಲಕ್ಷ್ಮಿ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಪೌರೋಹಿತ್ಯದ ಆರಂಭವಾಗಲಿದೆ.
ಆ.10ರಂದು ಪೂರ್ವಾರಾಧನೆ, ಆ.11ರಂದು ಮಧ್ಯಾರಾಧನೆ, ಮತ್ತು ಆ.12ರಂದು ಉತ್ತರಾರಾಧನೆ ನಡೆಯಲಿದ್ದು, ಆ ದಿನವೇ ಬೆಳಿಗ್ಗೆ 10 ಗಂಟೆಗೆ ಶ್ರೀಮಠದ ಮುಂದಿನ ರಾಜಬೀದಿಯಲ್ಲಿ ಮಹಾರಥೋತ್ಸವ ಜರುಗಲಿದೆ.
ಆ.9ರಂದು ಮಠದ ಆವರಣದಲ್ಲಿ ನಿರ್ಮಿತ ಪುಷ್ಕರಣಿಯ ಲೋಕಾರ್ಪಣೆ ನಡೆಯಲಿದೆ. ತಿರುಮಲ ತಿರುಪತಿ ದೇವಸ್ಥಾನದಿಂದ ತರಲಿರುವ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ಇಂದು ರಾಯರ ಮೂಲಬೃಂದಾವನಕ್ಕೆ ಸಮರ್ಪಿಸಲಾಗುವುದು.
ಆ.10ರಂದು ಸಾಧಕರಿಗೆ ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿ ವಿಶೇಷವಾಗಿ ರಾಯರ ಮೂಲಬೃಂದಾವನಕ್ಕೆ ನವರತ್ನ ಕವಚ ಸಮರ್ಪಿಸಲಾಗುತ್ತಿದೆ.ಇದನ್ನು ಓದಿ –ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ
ಏಳು ದಿನಗಳ ಆರಾಧನಾ ಅವಧಿಯಲ್ಲಿ ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನಸೆಳೆಯಲಿವೆ.