By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ
BengaluruKarnataka

ನಾಳೆ ಮೈಸೂರಿನಲ್ಲಿ ಸಾಹಿತ್ಯ ಲೋಕದ ದಿಗ್ಗಜ ಡಾ. ಎಸ್.ಎಲ್. ಭೈರಪ್ಪ ನವರ ಅಂತ್ಯಕ್ರಿಯೆ

Team Varthaman
Last updated: September 25, 2025 10:13 AM
Team Varthaman
Published: September 25, 2025
Share
SHARE

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಪರ್ವತಸಮಾನ ದಿಗ್ಗಜ, ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ, ಜನಮನಗಳಲ್ಲಿ ಶಾಶ್ವತ ಸ್ಥಾನ ಪಡೆದ ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ (94) ಅವರು ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Contents
  • ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಪರ್ವತಸಮಾನ ದಿಗ್ಗಜ, ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ, ಜನಮನಗಳಲ್ಲಿ ಶಾಶ್ವತ ಸ್ಥಾನ ಪಡೆದ ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ (94) ಅವರು ವಿಧಿವಶರಾಗಿದ್ದಾರೆ.
  • ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಅಳಿಯದ ಕೊಡುಗೆ
Join WhatsApp Group

ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕಾದಂಬರಿಗಳ ಮೂಲಕ ಕನ್ನಡದ ಹೆಮ್ಮೆಯನ್ನು ವಿಶ್ವಮಟ್ಟಕ್ಕೇರಿಸಿದ ಭೈರಪ್ಪನವರ ಕೃತಿಗಳು ಇಂದಿಗೂ ಅಚ್ಚಳಿಯದೆ ಉಳಿದಿವೆ.

ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆ

ಇಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಮೈಸೂರಿಗೆ ಕೊಂಡೊಯ್ಯಲಾಗುವುದು. ಮಧ್ಯಾಹ್ನ 3ಕ್ಕೆ ಪಾರ್ಥೀವ ಶರೀರ ಮೈಸೂರು ತಲುಪಲಿದ್ದು, ಸಂಜೆ 6 ಗಂಟೆಯವರೆಗೆ ಕಲಾಮಂದಿರದ ಮುಂಭಾಗದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಶರೀರವನ್ನು ಕೋಲ್ಡ್ ಸ್ಟೋರೆಜ್‌ನಲ್ಲಿ ಇಡಲಾಗುತ್ತದೆ.

ಸೆಪ್ಟೆಂಬರ್ 26ರಂದು ಶುಕ್ರವಾರ ಬೆಳಗ್ಗೆ ಮೈಸೂರಿನ ಕುವೆಂಪುನಗರದಲ್ಲಿರುವ ಭೈರಪ್ಪನವರ ನಿವಾಸದಲ್ಲಿ ಪೂಜಾ ವಿಧಿವಿಧಾನಗಳು ನಡೆಯಲಿದ್ದು, ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಸದ್ಯ ಅವರ ಪುತ್ರ ರವಿಶಂಕರ್ ಲಂಡನ್‌ನಿಂದ ಆಗಮಿಸುತ್ತಿದ್ದಾರೆ.

ಕನ್ನಡ ಸಾಹಿತ್ಯ ಲೋಕಕ್ಕೆ ಅಳಿಯದ ಕೊಡುಗೆ

ಭೈರಪ್ಪನವರ ಕೃತಿಗಳು ಕೇವಲ ಕಾದಂಬರಿಗಳಷ್ಟೇ ಅಲ್ಲದೆ, ಚಿತ್ರರಂಗ ಹಾಗೂ ದೂರದರ್ಶನದ ಮೂಲಕವೂ ಜನಮನಗಳನ್ನು ತಟ್ಟಿವೆ. ‘ವಂಶವೃಕ್ಷ’ ಕಾದಂಬರಿಯ ಆಧಾರಿತ ಸಿನಿಮಾ 1971ರಲ್ಲಿ ತೆರೆಕಂಡು ಭಾರೀ ಯಶಸ್ಸು ಕಂಡಿತ್ತು. ಅದೇ ರೀತಿ ತಬ್ಬಲಿಯು ನೀನಾದೆ ಮಗನೆ, ಮತದಾನ, ನಾಯಿನೆರಳು ಕೃತಿಗಳು ಸಿನಿಮಾವಾಗಿದ್ದರೆ, ಗೃಹಭಂಗ ಮತ್ತು ದಾಟು ಕಾದಂಬರಿಗಳ ಆಧಾರದ ಮೇಲೆ ಟಿವಿ ಧಾರಾವಾಹಿಗಳು ನಿರ್ಮಾಣಗೊಂಡಿದ್ದವು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಕರ್ನಾಟಕದ ಹಲವೆಡೆ ಮಳೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ
ಅ. 31ರೊಳಗೆ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಳಿಸಬೇಕು – ಡಿಸಿಎಂ ಡಿ.ಕೆ. ಶಿ
ಜಪಾನಿನ ಹೊಕ್ಕೈಡೋನಲ್ಲಿ 6.1 ತೀವ್ರತೆಯ ಭೂಕಂಪ
ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಶಂಕಿತ ಉಗ್ರನ ಸಾವು
ಕಾರು ಚಾಲಕನ ಆತ್ಮಹತ್ಯೆ: ಡಾ. ಕೆ. ಸುಧಾಕರ್ ಸೇರಿದಂತೆ ಮೂವರ ವಿರುದ್ಧ FIR
TAGGED:Dr. S.L. BhyrappakannadaKannada PoetlatestnewsMysore Newsಎಸ್.ಎಲ್. ಭೈರಪ್ಪ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaMain News

ದೇವರಾಜ ಅರಸು ದಾಖಲೆ ಮುರಿದ ಸಿಎಂ ಸಿದ್ದರಾಮಯ್ಯ

Team Varthaman
Team Varthaman
January 6, 2026
ಬೆಟ್ಟಿಂಗ್ ಪ್ರಕರಣ: ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ
ಚಿನ್ನದ ಬೆಲೆ ಇಳಿಕೆ – ಖರೀದಿಗೆ ಇದೇ ಉತ್ತಮ ಸಮಯ!
ಬೆಟ್ಟಿಂಗ್ ಆಪ್ ಹಗರಣ: ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ವಿರುದ್ಧ FIR ದಾಖಲೆ
ದಿಢೀ‌ರ್ ತೂಕ ಇಳಿಸಿಕೊಳ್ಳಬೇಕಾ? ಹಾಗಾದ್ರೆ ಹೆಸರು ಬೇಳೆ ತಿನ್ನಿ.
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?