ಬೆಂಗಳೂರು, ಅ.6: ರಾಜ್ಯ ಸರ್ಕಾರವು ಮೂರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಆದೇಶ ಹೊರಡಿಸಿದೆ.
ಈ ಕ್ರಮದಡಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಡಾ. ತ್ರಿಲೋಕ್‌ಚಂದ್ರ ಕೆ.ವಿ., ಸುರಲ್ಕರ್ ವಿಕಾಸ್ ಕಿಶೋರ್ ಮತ್ತು ರಾಮಚಂದ್ರನ್ ಆರ್. ಅವರ ಹುದ್ದೆಗಳಲ್ಲಿ ಬದಲಾವಣೆ ನಡೆದಿದೆ.
ಸರ್ಕಾರದ ಆದೇಶದ ಪ್ರಕಾರ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಡಾ. ತ್ರಿಲೋಕ್‌ಚಂದ್ರ ಕೆ.ವಿ. ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆ ಕೆ. ಫಾತೀಂ ಅವರ ವರ್ಗಾವಣೆಯಿಂದ ತೆರವಾಗಿತ್ತು.
ಇದೇ ವೇಳೆ, ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ ಹುದ್ದೆಯಿಂದ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಜೊತೆಗೆ, ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ)ಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿಯಾಗಿದ್ದ ಹಿನ್ನೆಲೆಯಲ್ಲಿ, ಸುರಲ್ಕರ್ ಅವರಿಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಪ್ರಭಾರವನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಅಲ್ಲದೆ, ಸುರಲ್ಕರ್ ವಿಕಾಸ್ ಕಿಶೋರ್ ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ (ಆರೋಗ್ಯ ಮತ್ತು ಶಿಕ್ಷಣ) ಹುದ್ದೆಯ ಜವಾಬ್ದಾರಿಯನ್ನೂ ಮುಂದುವರೆಸುವಂತೆ ಆದೇಶಿಸಲಾಗಿದೆ. ಇದರ ಮೂಲಕ ಸುರಲ್ಕರ್ ಅವರ ಕೈಯಲ್ಲಿ ಒಟ್ಟು ಮೂರು ಪ್ರಮುಖ ಹುದ್ದೆಗಳ ಜವಾಬ್ದಾರಿ ಒಟ್ಟುಗೂಡಿದೆಇದನ್ನು ಓದಿ -.ಮುಡಾ ಹಗರಣ: ಇಡಿಯಿಂದ 440 ಕೋಟಿ ರೂ. ಆಸ್ತಿ ಮುಟ್ಟುಗೋಲು
ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ವರ್ಗಾವಣೆ ಆದೇಶವನ್ನು ಪ್ರಕಟಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಅಧಿಕಾರಿಗಳ ವರ್ಗಾವಣೆ ಕ್ರಮವು ಇಲಾಖೆಯ ಒಳಸಂರಚನೆ ಮತ್ತು ಆಡಳಿತದ ಪರಿಣಾಮಕಾರಿತ್ವ ಹೆಚ್ಚಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.








