ಬೆಂಗಳೂರು :ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯ ಪ್ರಕಾರ, ಮುಂದಿನ 3 ರಿಂದ 4 ದಿನಗಳವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ತಾಪಮಾನದಲ್ಲೂ ಸ್ವಲ್ಪ ಇಳಿಕೆ ಸಂಭವಿಸಬಹುದೆಂದು ಹೇಳಲಾಗಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚು ಇರಬಹುದು. ಕೆಲವೊಂದು ಕಡೆಗಳಲ್ಲಿ ತೀವ್ರ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿಯೂ ಸಂಜೆ ಸಮಯದಲ್ಲಿ ಗುಡುಗು-ಮಿಂಚುಗಳೊಂದಿಗೆ ಮಳೆ ಬರುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಸುರಕ್ಷಿತ ಸ್ಥಳದಲ್ಲೇ ಇರಲು ಹಾಗೂ ಅನಗತ್ಯವಾಗಿ ಹೊರ ಹೋಗದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.ಇದನ್ನು ಓದಿ –ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಪ್ರಯತ್ನ – ರಕ್ಷಣೆಗೆ ಹೋದ ಮಗನೂ ಸಾವಿಗೆ ಶಿಕಾರ
ರೈತರು ತಮ್ಮ ಬೆಳೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿದೆ.