By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಹುಲಿ ಹತ್ಯೆಯ ಆರೋಪಿ ವಶಕ್ಕೆ: ಸಚಿವ ಖಂಡ್ರೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಹುಲಿ ಹತ್ಯೆಯ ಆರೋಪಿ ವಶಕ್ಕೆ: ಸಚಿವ ಖಂಡ್ರೆ
BengaluruKarnataka

ಹುಲಿ ಹತ್ಯೆಯ ಆರೋಪಿ ವಶಕ್ಕೆ: ಸಚಿವ ಖಂಡ್ರೆ

Team Varthaman
Last updated: October 4, 2025 6:50 PM
Team Varthaman
Published: October 4, 2025
Share
SHARE

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದರು.
ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.

Join WhatsApp Group

ಜಾಗೃತಿ ಮೂಡಿಸಿ:
ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಮಗಳಲ್ಲಿ ಮತ್ತು ಅರಣ್ಯದ ಹಾಡಿಯ ಬಳಿ ವನ್ಯಜೀವಿಗಳಿಗೆ ವಿಷ ಹಾಕುತ್ತಿರುವ ಘಟನೆಗಳು ಮತ್ತು ಕಳ್ಳಬೇಟೆ ಪ್ರಕರಣಗಳು ವರದಿಯಾಗುತ್ತಿದ್ದು, ಅರಣ್ಯವಾಸಿಗಳು ಮತ್ತು ಕಾಡಿನಂಚಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಹಾಗೂ ವನ್ಯಜೀವಿಗಳಿಂದ ಬೆಳೆ ಹಾನಿ ಆಗಿದ್ದಲ್ಲಿ ಪರಿಶೀಲಿಸಿ, ಪರಿಹಾರ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಂಕಿತ ಆರೋಪಿ ವಶಕ್ಕೆ:
ಹುಲಿಯನ್ನು ಮೂರು ಭಾಗವಾಗಿ ಕತ್ತರಿಸಿ ಹತ್ಯೆ ಮಾಡಿರುವ ಪ್ರಕರಣದ ಶಂಕಿತ ಆರೋಪಿಯ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆದಿದ್ದು, ಶೀಘ್ರವೇ ಹುಲಿ ಹತ್ಯೆಗೆ ನೈಜ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಮಲೆ ಮಹದೇಶ್ವರ ಅರಣ್ಯ ಭಾಗದಲ್ಲಿ ಗಸ್ತು ಹೆಚ್ಚಿಸಲು ಸೂಚಿಸಿದ ಸಚಿವರು, ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರೆ ಕ್ರಮಕ್ಕೆ ಶಿಫಾರಸು ಮಾಡುವಂತೆ ಹಾಗೂ 5 ಹುಲಿ ಹಾಗೂ ಮೊನ್ನೆ ನಡೆದಿರುವ ಹುಲಿ ಹತ್ಯೆಯ ಆರೋಪಿಗಳಿಗೆ ಶೀಘ್ರ ಶಿಕ್ಷೆ ಕೊಡಿಸಲು ಕ್ರಮಕೈಗೊಂಡು ಸ್ಪಷ್ಟ ಸಂದೇಶ ರವಾನಿಸಲು ಸೂಚಿಸಿದರು.ಇದನ್ನು ಓದಿ –ಜಾತಿಗಣತಿಗೆ ಗೈರಾದರೆ FIR

ಮೂಲಸೌಕರ್ಯ ಒದಗಿಸಲು ಸೂಚನೆ:
ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿದೆಯೇ ಇಲ್ಲವೇ, ಇವರು ಸರಿಯಾಗಿ ಗಸ್ತು ನಡೆಸುತ್ತಿದ್ದಾರೋ ಇಲ್ಲವೋ, ಎಂಸ್ಟ್ರೈಪ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಸಚಿವರು ಸೂಚಿಸಿದರು. ಸಿಬ್ಬಂದಿ ಗಸ್ತು ತಿರುಗುತ್ತಿರುವ ಕುರಿತಂತೆ ಜಿಪಿಎಸ್ ಸಹಿತ ಫೋಟೋ ತೆಗೆಯಲು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳು ಆಗಾಗ್ಗೆ ಪರಾಮರ್ಶಿಸಬೇಕು, ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದೂ ಈಶ್ವರ ಖಂಡ್ರೆ ತಿಳಿಸಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿರುವ ಸಿಬ್ಬಂದಿಗೆ ಬೂಟು, ಜಾಕೆಟ್, ಕುಡಿಯುವ ನೀರು, ಆಹಾರ ಧಾನ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲೂ ಸಚಿವರು ಸೂಚನೆ ನೀಡಿದರು.

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ಬೆಂಗಳೂರಿಗೂ ಎಬೋಲಾ ಆತಂಕ? ಮಹಿಳೆಯಲ್ಲಿ ಸೋಂಕಿನ ಲಕ್ಷಣ
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪ್ರಕರಣದಿಂದ ಕೈಬಿಡುವಂತೆ ನಟ ದರ್ಶನ್ ಅರ್ಜಿ
ಚಿನ್ನ–ಬೆಳ್ಳಿ ದರದಲ್ಲಿ ಭಾರಿ ಏರಿಕೆ
ವಿಡಿಯೋ ವೈರಲ್ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು
‘ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ ₹5,000 ಕೋಟಿ ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ
TAGGED:breakingnewsEshwar KhandrelatestnewsMM hillstiger carcassಹುಲಿ ಹತ್ಯೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಗ್ಯಾಸ್ ಕೊರತೆ: ‘ಹೈ’ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

Team Varthaman
Team Varthaman
March 17, 2026
ಕದನ ವಿರಾಮದ ಬಳಿಕವೂ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ
ಸಾಹಿತ್ಯದಿಂದ ಸಮಾಜ ಬದಲಾವಣೆ ಸಾಧ್ಯ: ಡಾ.ಎಸ್.ಪಿ.ಉಮಾದೇವಿ 
ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
ಭೀಕರ ದುರಂತ: 3 ಬೈಕ್ ಸವಾರರು ಹಾಗೂ ಇಬ್ಬರು ಬಾಲಕರ ದುರ್ಮರಣ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?