ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿರುವುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಸಮೀಪ ಹುಲಿ ಪ್ರತ್ಯಕ್ಷವಾಗಿರುವ ಮಾಹಿತಿ ಲಭ್ಯವಾಗಿದೆ.
ಇದೇ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಹಿನ್ನೆಲೆ, ಭದ್ರತಾ ಕ್ರಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ.
ಹುಲಿ ಕಾಣಿಸಿಕೊಂಡ ಮಾಹಿತಿ ದೊರಕುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿಯ ಚಲನವಲನ ಪತ್ತೆಹಚ್ಚಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.ಇದನ್ನು ಓದಿ –ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
ಇತ್ತೀಚೆಗೆ ಬಿಇಎಂಎಲ್ ಪ್ರದೇಶದ ಸಮೀಪವೂ ಹುಲಿ ಕಾಣಿಸಿಕೊಂಡಿದ್ದ ಘಟನೆ ನಡೆದಿದ್ದು, ಇದೀಗ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಮತ್ತೆ ಹುಲಿ ಕಂಡುಬಂದಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.








