ತಿರುಪತಿ: ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ತಾನಂ (TTD) ಹುಂಡಿಯಲ್ಲಿ ಭಕ್ತರು ಹಾಕಿದ್ದ 100 ಕೋಟಿಗೂ ಹೆಚ್ಚು ಹಣ ಕಳ್ಳತನವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಟಿಟಿಡಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಅವರು, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಕೆ ಪೆಟ್ಟಿಗೆಯಿಂದ ಹಣವನ್ನು ಕದ್ದಿರುವುದಾಗಿ ಆರೋಪಿಸಿ, ಅದರ CCTV ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.
ಅವರ ಪ್ರಕಾರ, ಲೂಟಿ ಮಾಡಿದ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಕೋಟ್ಯಂತರ ಹೂಡಿಕೆ ಮಾಡಲಾಗಿದ್ದು, ಅಕ್ರಮ ಹಣವನ್ನು ನೇರವಾಗಿ ಜಗನ್ ಮೋಹನ್ ರೆಡ್ಡಿ ಅವರ ತಾಡೆಪಲ್ಲಿ ಪ್ಯಾಲೇಸ್‌ಗೆ ವರ್ಗಾಯಿಸಲಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
2019ರಿಂದ 2024ರವರೆಗೆ ವೈಎಸ್‌ಆರ್‌ಸಿಪಿ ಆಡಳಿತದ ಅವಧಿಯಲ್ಲಿ, ಟಿಟಿಡಿಯ ಇತಿಹಾಸದಲ್ಲೇ ಅತಿ ದೊಡ್ಡ 100 ಕೋಟಿ ರೂಪಾಯಿ ಲೂಟಿ ನಡೆದಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಟಿಡಿಪಿ ನಾಯಕ ನಾರಾ ಲೋಕೇಶ್ ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಸಿಸಿಟಿವಿ ದೃಶ್ಯ ಹಂಚಿಕೊಂಡು, ವೈಎಸ್‌ಆರ್‌ಸಿಪಿ ಆಡಳಿತದ ಅವಧಿಯಲ್ಲಿ ಭಕ್ತರ ಕಾಣಿಕೆ ಹಣವನ್ನು ದೋಚಲಾಗಿದೆ ಎಂದು ಟೀಕಿಸಿದ್ದಾರೆ.
ಈ ಪ್ರಕರಣವನ್ನು ಹೈಕೋರ್ಟ್ ಸಿಐಡಿಗೆ ತನಿಖೆಗಾಗಿ ವರ್ಗಾಯಿಸಿದ್ದು, ಒಂದು ತಿಂಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದೆ.ಇದನ್ನು ಓದಿ – ರಾಜ್ಯದಲ್ಲಿ ಭಾರಿ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಜೊತೆಗೆ ಮಂಡಳಿಯ ನಿರ್ಧಾರಗಳು ಹಾಗೂ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ರೆಡ್ಡಿ ತಿಳಿಸಿದ್ದಾರೆ.








