ಮೈಸೂರು: ನಗರದ ರಿಂಗ್ ರಸ್ತೆಯ ಸಮೀಪದಲ್ಲಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ದಟ್ಟಗಳ್ಳಿ ನಾಲ್ಕನೇ ಹಂತದ ಸಮೀಪದಲ್ಲಿರುವ ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿದೆ. ಪರಿಣಾಮ ಪಬ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಅವಘಡದಲ್ಲಿ ಸಾಹೀನ್ ಹಾಗೂ ಪ್ರಕಾಶ್ ಎಂಬ ಇಬ್ಬರು ಸಜೀವ ದಹನಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








