By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಶಕ್ತಿ ಯೋಜನೆಯಿಂದ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ಇಲಾಖೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಶಕ್ತಿ ಯೋಜನೆಯಿಂದ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ಇಲಾಖೆ
BengaluruKarnatakaLatest News

ಶಕ್ತಿ ಯೋಜನೆಯಿಂದ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ಇಲಾಖೆ

Team Varthaman
Last updated: December 18, 2025 12:02 PM
Team Varthaman
Published: December 18, 2025
Share
SHARE
  • ನಾಲ್ಕು ನಿಗಮಗಳಿಗೆ 4,006.47 ಕೋಟಿ ರೂ. ಬಾಕಿ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ 134 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಜನರಿಗೆ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಆರಂಭದಲ್ಲಿ ಜನಪ್ರಿಯತೆ ಪಡೆದ ಈ ಯೋಜನೆಗಳೇ ಇದೀಗ ರಾಜ್ಯ ಸರ್ಕಾರವನ್ನು ಆರ್ಥಿಕ ಸಂಕಷ್ಟದತ್ತ ತಳ್ಳಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ಆದರೆ ಈ ಯೋಜನೆಗಳ ಭಾರದಿಂದ ಸರ್ಕಾರದ ಹಣಕಾಸು ಸ್ಥಿತಿ ಕುಸಿಯುತ್ತಿದೆಯೇ ಎಂಬ ಪ್ರಶ್ನೆ ಈಗ ತೀವ್ರವಾಗಿದೆ.

Join WhatsApp Group

ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷ ನಾಯಕರು ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ಉಳಿಸಿಕೊಂಡಿರುವುದಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪೂರಕವಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲೇ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಾಕಿ ಉಳಿದಿರುವುದನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದರು. ಇದರ ಬೆನ್ನಲ್ಲೇ, ಶಕ್ತಿ ಯೋಜನೆಯಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿದಿರುವುದು ದಾಖಲೆ ಸಮೇತವಾಗಿ ಬೆಳಕಿಗೆ ಬಂದಿದೆ.

ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು ಸುಮಾರು 4,000 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಕುರಿತು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜ್ ಅವರ ಪ್ರಶ್ನೆಗೆ ಸಾರಿಗೆ ಸಚಿವರೇ ಉತ್ತರ ನೀಡಿದ್ದಾರೆ. ಇದರಿಂದ ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ವಿಪಕ್ಷಗಳು ಮುಂದಿಟ್ಟಿವೆ.

ಶಕ್ತಿ ಯೋಜನೆಯ ಹಣ ಬಾಕಿ ಕುರಿತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. 2023ರಿಂದ ಇಲ್ಲಿವರೆಗೆ ಶಕ್ತಿ ಯೋಜನೆಯ ಅಡಿಯಲ್ಲಿ ಸುಮಾರು 4,006 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಅವರು ತಿಳಿಸಿದ್ದಾರೆ.ಇದನ್ನು ಓದಿ –ಗಿರವಿ ಇಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಆರೋಪ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸೇರಿ ನಾಲ್ಕು ನಿಗಮಗಳಿಗೆ ಒಟ್ಟು 4,006.47 ಕೋಟಿ ರೂಪಾಯಿ ಬಾಕಿಯಿದೆ. 2023–24ನೇ ಸಾಲಿನಲ್ಲಿ 1,180.62 ಕೋಟಿ ರೂಪಾಯಿ, 2024–25ನೇ ಸಾಲಿನಲ್ಲಿ 1,170.45 ಕೋಟಿ ರೂಪಾಯಿ ಮತ್ತು 2025–26ನೇ ಸಾಲಿನಲ್ಲಿ ನವೆಂಬರ್ 25ರ ತನಕ 1,655.40 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಆರೋಪಿಸಿದ್ದಾರೆ.

  • ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ
    by Team Varthaman
    July 18, 2026
  • ಲಂಚ ಪಡೆಯುವಾಗ ಎಪಿಪಿ ಬಂಧನ
    by Team Varthaman
    July 17, 2026
  • ಜಿಬಿಎ ಚುನಾವಣೆ: ಡಿಸೆಂಬರ್ ಒಳಗೆ ನಡೆಸಲು ಸೂಚನೆ
    by Team Varthaman
    July 17, 2026
  • ಇ-ಸ್ವತ್ತು ಸಮಸ್ಯೆಗೆ ಸಮಿತಿ ರಚನೆ:ಸಚಿವ ಈಶ್ವರ್ ಖಂಡ್ರೆ
    by Team Varthaman
    July 17, 2026
  • ಕರ್ನಾಟಕದಲ್ಲಿ ಮಳೆ ಆರ್ಭಟ ತೀವ್ರ: ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಳ
    by Team Varthaman
    July 17, 2026
ರಾಜ್ಯದ ಹಲವು ಭಾಗಗಳಲ್ಲಿ ಮಳೆ: ಸಿಡಿಲಿಗೆ ಇಬ್ಬರು ಬಲಿ
ರಾಜ್ಯೋತ್ಸವ ಪ್ರಶಸ್ತಿ 2025–26 ಪ್ರಕಟ: 70 ಸಾಧಕರ ಆಯ್ಕೆ
10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಅಧಿಕಾರಿ
“ನಮ್ಮ ನಡುವೆ ಭಿನ್ನಾಭಿಪ್ರಾಯವೇ ಇಲ್ಲ”: ಸಿಎಂ–ಡಿಸಿಎಂ
ಜೂನ್ 26ರ ವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ
TAGGED:Karnataka GovtKSRTCshakti yoyane
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaLatest NewsTrending

ರೈತರಿಗೆ ಸಂತಸದ ಸುದ್ದಿ: ಮನೆಬಾಗಿಲಿಗೇ ಪೋಡಿ ದುರಸ್ತಿ ಸೇವೆ

Team Varthaman
Team Varthaman
April 26, 2025
ರಾಮನಗರ: 19 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ
ವಿಟಮಿನ್ ಬಿ 12 ಕೊರತೆಯಾದ್ರೆ ಹಲವು ಆರೋಗ್ಯ ತಾಪತ್ರಯ
1ನೇ ತರಗತಿ ಸೇರ್ಪಡೆ : ಮಕ್ಕಳ ಮಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?