ಬೆಂಗಳೂರು: ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ಕಿರಣ್ (25) ಮತ್ತು ಯಶವಂತ್ (25) ಎಂದು ಗುರುತಿಸಲಾಗಿದೆ. ಬೈಕ್‌ನ ಹಿಂಬದಿ ಸವಾರ ಗೌತಮ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 1 ಗಂಟೆ ಸುಮಾರಿಗೆ ಮೂವರು ಯುವಕರು ಹೆಲ್ಮೆಟ್ ಧರಿಸದೆ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದ್ದು, ಪಲ್ಟಿಯಾಗಿದೆ. ಪರಿಣಾಮ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಯಶವಂತ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಇದನ್ನು ಓದಿ –ಪರಪ್ಪನ ಅಗ್ರಹಾರ ಜೈಲಿನಲ್ಲಿ CCB ದಾಳಿ
ಗಾಯಗೊಂಡ ಗೌತಮ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.








