ಬೆಂಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ದುರ್ಬಲಗೊಳಿಸಲು ತುಮಕೂರಿನಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಅಧಿಕಾರದ ಒಳಜಗಳ ಮುಂದುವರಿದಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವ ಉದ್ದೇಶಕ್ಕಾಗಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು.
ರಾಜಕೀಯ ಲಾಭಕ್ಕಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ಭರಿಸಲು ಜನರ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಇದರಿಂದ ಬೆಲೆ ಏರಿಕೆ ಉಂಟಾಗಿ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.ಇದನ್ನು ಓದಿ –ಯಾವ ಸಾಧನೆಗೆ ಸಮಾವೇಶ ಮಾಡುತ್ತಿರುವಿರಿ: ವಿಶ್ವನಾಥ್
ಎರಡು ವರ್ಷಗಳಲ್ಲಿ ನೂರಾರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆಡಳಿತ ವೈಫಲ್ಯದ ಬಗ್ಗೆ ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.








