ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವ ರೈತರು ದುರ್ಮರಣ ಹೊಂದಿದ ದುರ್ಘಟನೆ ನಡೆದಿದೆ.
ನಾವದಗಿ ಗ್ರಾಮದ ರೇವಣಸಿದ್ದ (28) ಹಾಗೂ ಜೇವರ್ಗಿ ಮೂಲದ ಯಲ್ಲಾಲಿಂಗ (28) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ (ಏ.23) ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಮಳೆ ಆರಂಭವಾಗಿತ್ತು. ಮಳೆಯಿಂದ ತಪ್ಪಿಸಿಕೊಳ್ಳಲು ಇಬ್ಬರೂ ಜಮೀನಿನಲ್ಲಿದ್ದ ಮಾವಿನ ಮರದ ಕೆಳಗೆ ನಿಂತಿದ್ದರು. ಇದೇ ವೇಳೆ ಮರಕ್ಕೆ ಸಿಡಿಲು ಅಪ್ಪಳಿಸಿ, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನು ಓದಿ –ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
ಘಟನಾ ಸ್ಥಳಕ್ಕೆ ಖಟಕ್ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಖಟಕ್ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








