ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಯುಜಿಸಿಇಟಿ (UGCET) ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ರಾತ್ರಿ ಪ್ರಕಟಿಸಿದೆ.
ಈ ಫಲಿತಾಂಶವನ್ನು ಮೂಲ ವೇಳಾಪಟ್ಟಿಯ ಪ್ರಕಾರ ಜುಲೈ 14ರಂದು ಪ್ರಕಟಿಸಬೇಕಾಗಿದ್ದರೂ, ನಿಗದಿತ ದಿನಾಂಕಕ್ಕೂ ಮುನ್ನವೇ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಪ್ರಕಟಿಸಲಾದ ತಾತ್ಕಾಲಿಕ ಫಲಿತಾಂಶದ ಬಗ್ಗೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದರೆ, ಜುಲೈ 14ರಂದು ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಇದನ್ನು ಓದಿ –ಬಿಡದಿ ಟೌನ್‌ಶಿಪ್ ಸರ್ವೆಗೆ ಸರ್ಕಾರದ ಒತ್ತಡ: ಹೆಚ್.ಡಿ. ಕುಮಾರಸ್ವಾಮಿ ಆರೋಪ
ಜುಲೈ 9ರಂದು ಬೆಳಿಗ್ಗೆ 11 ಗಂಟೆಯವರೆಗೆ ಅಭ್ಯರ್ಥಿಗಳು ದಾಖಲಿಸಿದ್ದ ಆಯ್ಕೆಗಳು ಹಾಗೂ ಇಚ್ಛೆಗಳ ಆಧಾರದ ಮೇಲೆ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಕೆಇಎ ತಿಳಿಸಿದೆ.








