ಬೆಂಗಳೂರು: 2026ನೇ ಸಾಲಿನ ಯುಜಿ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.
ವಿದ್ಯಾರ್ಥಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಕೆಇಎ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಏಪ್ರಿಲ್ 22, 23 ಮತ್ತು 24ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಾಗಿತ್ತು.
745 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ
ರಾಜ್ಯದಾದ್ಯಂತ 745 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, ಪರೀಕ್ಷಾ ಪಾರದರ್ಶಕತೆಗಾಗಿ 15,265 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಒಟ್ಟು 1,86,099 ವಿದ್ಯಾರ್ಥಿನಿಯರು ಹಾಗೂ 1,44,380 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಈ ಬಾರಿಯ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆ ರಾಜಕೀಯ ವಿವಾದಕ್ಕೂ ಕಾರಣವಾಗಿದ್ದು, ಬಳಿಕ ಕೆಇಎ ನಿರ್ದೇಶನದ ಮೇರೆಗೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.ಇದನ್ನು ಓದಿ –ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ: ಸಿಎಂ ಡಿಕೆಶಿ
ಈಗ ಫಲಿತಾಂಶ ಪ್ರಕಟವಾಗಿರುವುದರಿಂದ ವಿದ್ಯಾರ್ಥಿಗಳಲ್ಲಿ ಮುಂದಿನ ಪ್ರವೇಶ ಪ್ರಕ್ರಿಯೆಗಳ ಕುರಿತ ನಿರೀಕ್ಷೆ ಹೆಚ್ಚಾಗಿದೆ.








