By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಬರಗಾಲ ನಿರ್ವಹಣೆಗೆ ತುರ್ತು ಕ್ರಮ: ‘ಉದ್ಯೋಗ ಸೇತುವೆ’ – ಸಿಎಂ ಘೋಷಣೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಬರಗಾಲ ನಿರ್ವಹಣೆಗೆ ತುರ್ತು ಕ್ರಮ: ‘ಉದ್ಯೋಗ ಸೇತುವೆ’ – ಸಿಎಂ ಘೋಷಣೆ
KarnatakaUttara Kannada

ಬರಗಾಲ ನಿರ್ವಹಣೆಗೆ ತುರ್ತು ಕ್ರಮ: ‘ಉದ್ಯೋಗ ಸೇತುವೆ’ – ಸಿಎಂ ಘೋಷಣೆ

Team Varthaman
Last updated: July 7, 2026 8:01 PM
Team Varthaman
Published: July 7, 2026
Share
SHARE

ಕಲಬುರಗಿ: ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡು ಒಂದು ತಿಂಗಳಾಗಿದೆ. ರಾಜ್ಯದ ಜನರ ಸೇವೆಗೆ ಅವಕಾಶ ಕೇಳಿ ಹೆಜ್ಜೆ ಇಡುತ್ತಿದ್ದೇನೆ. ಸಾಮೂಹಿಕ ನಾಯಕತ್ವದಲ್ಲಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಕಲಬುರಗಿಯಲ್ಲಿ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಬರಗಾಲ ಪರಿಸ್ಥಿತಿ, ಗ್ರಾಮೀಣ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕುರಿತು ಮಹತ್ವದ ಘೋಷಣೆಗಳನ್ನು ಮಾಡಿದರು.

Contents
  • ಕಲಬುರಗಿ: ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡು ಒಂದು ತಿಂಗಳಾಗಿದೆ. ರಾಜ್ಯದ ಜನರ ಸೇವೆಗೆ ಅವಕಾಶ ಕೇಳಿ ಹೆಜ್ಜೆ ಇಡುತ್ತಿದ್ದೇನೆ. ಸಾಮೂಹಿಕ ನಾಯಕತ್ವದಲ್ಲಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
  • ಎಸ್ ಐ ಆರ್ ರಾಜಕೀಯ ಹಸ್ತಕ್ಷೇಪವಿಲ್ಲ :

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಗೆ ಸರ್ಕಾರ ₹5,000 ಕೋಟಿ ಅನುದಾನ ನೀಡುತ್ತಿರುವುದಾಗಿ ಘೋಷಿಸಿದರು.

Join WhatsApp Group

ಈ ಅನುದಾನದಿಂದ ಮೂಲಸೌಕರ್ಯ, ಉದ್ಯೋಗ, ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

37 ತಾಲೂಕುಗಳಲ್ಲಿ ಕೊರತೆ:

ಸಿಎಂ ಡಿಕೆ ಶಿವಕುಮಾರ್ ಅವರ ಪ್ರಕಾರ, ರಾಜ್ಯದ 37 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ದಾಖಲಾಗಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬರಗಾಲದ ಲಕ್ಷಣಗಳು ಕಾಣಿಸುತ್ತಿದ್ದು, ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ.
ಅಧಿಕಾರಿಗಳಿಗೆ ಈ ಕೆಳಗಿನ ವಿಷಯಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.

ಕುಡಿಯುವ ನೀರಿನ ವ್ಯವಸ್ಥೆ, ರೈತರಿಗೆ ಮೇವು ಪೂರೈಕೆ, ಬಿತ್ತನೆ ಬೀಜ ವಿತರಣೆ, ರಸಗೊಬ್ಬರ ಲಭ್ಯತೆ, ವಿದ್ಯುತ್ ಸಮಸ್ಯೆಗಳ ತ್ವರಿತ ಪರಿಹಾರ ನೀಡಲು ಸೂಚಿಸಲಾಗಿದೆ.

ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಿಂದಿನ ಅವಧಿಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಲ್ಲಿ ವಿಳಂಬವಾದ ಕಾರಣ ಕಾಮಗಾರಿಗಳು ನಿಧಾನಗೊಂಡಿದ್ದವು ಎಂದು ಸಿಎಂ ತಿಳಿಸಿದರು.

ಬರ ಪರಿಸ್ಥಿತಿಯ ಅಧ್ಯಯನ
ಬೀದರ್ ಹಾಗೂ ಬಸವಕಲ್ಯಾಣದಿಂದಲೇ ಬರ ಪರಿಸ್ಥಿತಿಯ ಅಧ್ಯಯನ ಆರಂಭಿಸಿರುವುದಾಗಿ ತಿಳಿಸಿದ ಸಿಎಂ, ಮುಂದಿನ ದಿನಗಳಲ್ಲಿ ಬೆಳಗಾವಿ ಸೇರಿದಂತೆ ವಿಭಾಗ ಮಟ್ಟದಲ್ಲಿ ಪರಿಶೀಲನಾ ಸಭೆಗಳನ್ನು ನಡೆಸುವುದಾಗಿ ಹೇಳಿದರು.

ಉದ್ಯೋಗ ಸೇತುವೆ:

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸಲು ‘ಉದ್ಯೋಗ ಸೇತುವೆ’ ಎಂಬ ಹೊಸ ಯೋಜನೆಯನ್ನು ಕಲಬುರಗಿಯಿಂದಲೇ ಘೋಷಿಸಿದರು. ದೊಡ್ಡ ನಗರಗಳ ಬದಲಾಗಿ ಟಿಯರ್-2 ಮತ್ತು ಟಿಯರ್-3 ನಗರಗಳಲ್ಲಿ ಕೈಗಾರಿಕೆಗಳು ಬರಲು ಕಡಿಮೆ ದರದಲ್ಲಿ ಭೂಮಿ ಒದಗಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು. ಇದರಿಂದ, ಗ್ರಾಮೀಣ ಯುವಕರಿಗೆ ಉದ್ಯೋಗ, ಕೈಗಾರಿಕಾ ಹೂಡಿಕೆ ಹೆಚ್ಚಳ, ಸ್ಥಳೀಯ ಆರ್ಥಿಕತೆ ಬಲಪಡಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.ಇದನ್ನು ಓದಿ –ವಯನಾಡಿನಲ್ಲಿ ಭೂಕುಸಿತ : ಇಬ್ಬರು ಕಾರ್ಮಿಕರು ಮೃತ್ಯು

ಎಸ್ ಐ ಆರ್ ರಾಜಕೀಯ ಹಸ್ತಕ್ಷೇಪವಿಲ್ಲ :

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದರು. ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜಕೀಯ ಇಲ್ಲ. ಚುನಾವಣಾ ಆಯೋಗದ ನಿರ್ದೇಶನದಂತೆ ಮನೆ ಮನೆಗೆ ಬಿಎಲ್‌ಒಗಳು ತೆರಳಿ ಪರಿಷ್ಕರಣೆ ನಡೆಸಬೇಕು. ಮತದಾರರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

  • ಕೆಆರ್‌ಎಸ್‌ನಲ್ಲಿ ನೀರಿನ ಸಂಗ್ರಹ ಹೆಚ್ಚಳ
    by Team Varthaman
  • ಬರಗಾಲ ನಿರ್ವಹಣೆಗೆ ತುರ್ತು ಕ್ರಮ: ‘ಉದ್ಯೋಗ ಸೇತುವೆ’ – ಸಿಎಂ ಘೋಷಣೆ
    by Team Varthaman
  • ವಯನಾಡಿನಲ್ಲಿ ಭೂಕುಸಿತ : ಇಬ್ಬರು ಕಾರ್ಮಿಕರು ಮೃತ್ಯು
    by Team Varthaman
  • ರಾಜ್ಯಾದ್ಯಂತ ಭಾರೀ ಮಳೆ: 2 ಜಿಲ್ಲೆಗಳಿಗೆ ರೆಡ್ ಅಲರ್ಟ್
    by Team Varthaman
  • ಮಹಿಳೆಯರ ಸಬಲೀಕರಣಕ್ಕೆ ಮತ್ತಷ್ಟು ಹೊಸ ಯೋಜನೆಗಳು: ಡಿ.ಕೆ. ಶಿವಕುಮಾರ್
    by Team Varthaman
ಶಿವಮೊಗ್ಗ: ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರಲ್ಲಿ RCB ಪಂದ್ಯಕ್ಕೆ ಅನುಮತಿ ನೀಡಿಲ್ಲ :ಸಚಿವ ಪರಮೇಶ್ವರ್
ಭಯೋತ್ಪಾದಕ ಬೆದರಿಕೆಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ
ಸಾವಿನ ಮಾಹಿತಿ ಕೊಟ್ಟಿರಲಿಲ್ಲ: ಸಿಎಂ
ಕೋಲಾರದಲ್ಲಿ ದೇಶದ ಮೊದಲ ಖಾಸಗಿ ಹೆಲಿಕಾಪ್ಟರ್ ಘಟಕ
TAGGED:breakingnewsDK shivkumarlatestnewsUdyoga Setuveಬರಗಾಲ ನಿರ್ವಹಣೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnataka

ಹೃದಯಾಘಾತಕ್ಕೆ ನವವಿವಾಹಿತ ಬಲಿ

Team Varthaman
Team Varthaman
March 5, 2026
ಶರಣ ಲೋಕದ ಧ್ರುವತಾರೆ…ಸಮಗಾರ ಹರಳಯ್ಯ
ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು!
ದೇವರು ವರ-ಶಾಪ ನೀಡಲ್ಲ: ಸಿದ್ದರಾಮಯ್ಯರನ್ನು ಹೊಗಳಿದ ಡಿಕೆಶಿ
ಬಿಸಿಲಿನ ತಾಪಕ್ಕೆ ತಂಪು ಪಾನೀಯ ವರದಾನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?