ಚೆನ್ನೈ: ಕರ್ನಾಟಕದ ಮೇಕೆದಾಟು ಯೋಜನೆ ವಿರುದ್ಧ ಕಾನೂನು ಹೋರಾಟವನ್ನು ತೀವ್ರಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಶೀಘ್ರವೇ ಗುದ್ದಲಿ ಪೂಜೆ ನಡೆಯಲಿದೆ ಎಂದು ಹೇಳಿದ ಬೆನ್ನಲ್ಲೇ ವಿಜಯ್ ಈ ಖಡಕ್ ಸೂಚನೆ ನೀಡಿದ್ದಾರೆ.
ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಲು ಬಿಡಬಾರದು ಎಂದು ಹೇಳಿರುವ ಅವರು, ತಮಿಳುನಾಡಿನ ನೀರಾವರಿ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ರಾಜಿ ಬೇಡ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಇದನ್ನು ಓದಿ –ಭಟ್ಕಳ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಚೆನ್ನೈನಲ್ಲಿ ಕಾವೇರಿ ಜಲವಿವಾದ ಹಾಗೂ ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆಸಿದ ವಿಜಯ್, ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.








