ಬೆಂಗಳೂರು: ಶಕ್ತಿ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ವಿವಿಧೆಡೆ ಮಳೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆ ಒಟ್ಟು 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅದರ ಜೊತೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಹ ಮಳೆ ಅಬ್ಬರಿಸಲಿದೆ.
ಹವಾಮಾನ ತಜ್ಞರ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು ,ಜನತೆ ಎಚ್ಚರಿಕೆ ವಹಿಸಲು ಇಲಾಖೆ ಮನವಿ ಮಾಡಿದೆ.








