ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಒಣ ಹವಾಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು:
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಮಳೆಯ ಸಾಧ್ಯತೆ ಹೆಚ್ಚಿದೆ.
ಇತರ ಜಿಲ್ಲೆಗಳ ಹವಾಮಾನ:
ಉತ್ತರ ಒಳನಾಡು – ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ.
ದಕ್ಷಿಣ ಒಳನಾಡು – ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ವಿಜಯನಗರ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ.
ಕರಾವಳಿ – ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಒಣ ಹವೆಯ ಜಿಲ್ಲೆಗಳು:
ಹಾವೇರಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹವಾಮಾನ ಒಣಗಿರುವ ಸಾಧ್ಯತೆ ಇದೆ.ಇದನ್ನು ಓದಿ –ಮೈಸೂರು:ಫ್ಲೈಓವರ್ ಯೋಜನೆಗೆ ಸಂಸದ ಯದುವೀರ್ ವಿರೋಧ
ಬೆಂಗಳೂರು ಹವಾಮಾನ:
ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 19°C ಇರಲಿದ್ದು, ಗಾಳಿಯ ವೇಗ ಗಂಟೆಗೆ ಸುಮಾರು 11 ಕಿಮೀ ಇರಲಿದೆ.








