ಬೆಂಗಳೂರು, ಮಾರ್ಚ್ 24: ನಿನ್ನೆ ಒಣಹವೆಯಿಂದ ಕೂಡಿದ್ದ ರಾಜ್ಯದ ಹವಾಮಾನ ಇಂದು ಹಠಾತ್ ಬದಲಾಗಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ಇದೆ.ಇದನ್ನು ಓದಿ –ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.








