ಬೆಂಗಳೂರು: ದೀಪಾವಳಿಯ ಸಂಭ್ರಮಕ್ಕೆ ಈ ಬಾರಿ ಮಳೆಯ ಅಡ್ಡಿ ಬೀಳುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ಗಾಳಿಯು ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ.








