- ಕರಾವಳಿಗೆ ಆರೆಂಜ್ ಎಚ್ಚರಿಕೆ
ಬೆಂಗಳೂರು: ಕೆಲವೊಂದು ದಿನಗಳ ವಿರಾಮದ ನಂತರ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದ್ದು, ಮುಂದಿನ ವಾರವಿಡಿ ಭಾರೀ ಮಳೆಯ ಸಾಧ್ಯತೆವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು (ಆಗಸ್ಟ್ 4) ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ (ಆಗಸ್ಟ್ 5) ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಭಾರೀ ಮಳೆಯ ಎಚ್ಚರಿಕೆಯಿಂದ ಆರೆಂಜ್ ಅಲರ್ಟ್ ಜಾರಿಗೊಳ್ಳಲಿದೆ. ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಬಿರುಸಿನ ಮಳೆಯಾಗುವ ಸಂಭವವಿದ್ದು, ಆ.7ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಸೇರಿದಂತೆ ಇತರ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಸುರಕ್ಷಿತವಾಗಿ ಇರಲು ಅಗತ್ಯ ಮುಂಜಾಗ್ರತೆ ವಹಿಸಲು, ನೀರು ನಿಲ್ಲುವ ಪ್ರದೇಶಗಳನ್ನು ತ್ವರಿತವಾಗಿ ಖಾಲಿ ಮಾಡಿಸಲು, ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುತ್ತಂತೆ ಹವಾಮಾನ ಇಲಾಖೆ ಮನವಿ ಮಾಡಿಕೊಂಡಿದೆ.