ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಗೌಡರ್ ಕೊಲೆ ಪ್ರಕರಣದ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆ.
ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 21 ಆರೋಪಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.
ಇಂದು ಬೆಳಿಗ್ಗೆ 15ನೇ ಆರೋಪಿಯಾಗಿರುವ ವಿನಯ ಕುಲಕರ್ಣಿ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ತೀರ್ಪು ಪ್ರಕಟಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶಿಸಿದರು.ಇದನ್ನು ಓದಿ –ಚಾರಣಿಗರಿಗೆ ಟ್ರ್ಯಾಕಿಂಗ್ ಆಪ್ ಮತ್ತು ವಿಮೆ ಕಡ್ಡಾಯ
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೇಶ್ ಗೌಡ ಗೌಡರ್ ಹತ್ಯೆ ನಡೆದಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿತ್ತು.








