ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ವಿಚಾರಣೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಸೂಚನೆ ನೀಡಿದ್ದು, ಇದರಿಂದ ಕುಲಕರ್ಣಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಿದೆ.
ಈ ಹಿಂದೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಬಳಿಕ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅವರ ಪರವಾಗಿ ವಕೀಲ ಶರಣಗೌಡ ಪಾಟೀಲ್ ಅವರ ತಂಡ ವಾದ ಮಂಡಿಸಿದ್ದು, ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರ ಪೀಠ ಜಾಮೀನು ಮಂಜೂರು ಮಾಡಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಹಿಂದಿನ ಜಾಮೀನು ರದ್ದು ಮಾಡಲಾಗಿತ್ತು.ಇದನ್ನು ಓದಿ –ಪಾಸ್‌ಪೋರ್ಟ್ ಪರಿಶೀಲನೆಗೆ ಹೊಸ ಮಾರ್ಗಸೂಚಿ
ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ಜಾಮೀನು ರದ್ದುಪಡಿಸುವಂತೆ ಸಿಬಿಐ ಮನವಿ ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ನೀಡಿದ ಜಾಮೀನಿನಿಂದ ಪ್ರಕರಣದ ಮುಂದಿನ ವಿಚಾರಣೆ ವೇಗ ಪಡೆಯುವ ನಿರೀಕ್ಷೆಯಿದೆ.








