ಶಿವಮೊಗ್ಗ: ತಾವರೆಕೊಪ್ಪ ಹುಲಿ–ಸಿಂಹ ಧಾಮದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ವನ್ಯಜೀವಿ ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಬೆಂಗಳೂರಿನ ಬನ್ನೇರುಘಟ್ಟ ಮೂಲದ 26 ವರ್ಷದ ಸಮೀಕ್ಷಾ ರೆಡ್ಡಿ. ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದಿದ್ದ ಅವರು, ಇತ್ತೀಚೆಗಷ್ಟೇ ತರಬೇತಿಗಾಗಿ ತಾವರೆಕೊಪ್ಪ ಧಾಮಕ್ಕೆ ನಿಯೋಜಿತರಾಗಿದ್ದರು.
ಗರ್ಭಿಣಿಯಾಗಿದ್ದ ನೀರಾನೆ ಆಹಾರ ಸೇವಿಸದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದಾಗ ಅದು ಏಕಾಏಕಿ ದಾಳಿ ಮಾಡಿದೆ. ತೀವ್ರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.ಇದನ್ನು ಓದಿ –ವಾಣಿಜ್ಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಘಟನೆ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿ, ಸುರಕ್ಷತಾ ನಿಯಮಗಳ ಪಾಲನೆ ಬಗ್ಗೆ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.








