ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡಕೆರೆ ಸಮೀಪ ಭೀಕರ ಕೊಲೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಸ್ನೇಹಿತನೊಂದಿಗೆ ಮದ್ಯಪಾನಕ್ಕೆ ತೆರಳಿದ್ದ ಯುವಕನನ್ನು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ನಂಜುಂಡಸ್ವಾಮಿ (22) ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ಕತ್ತು ಸೀಳಿದ ಸ್ಥಿತಿಯಲ್ಲಿ ಅವನ ಮೃತದೇಹ ಪತ್ತೆಯಾಗಿದೆ.
ಮಾಹಿತಿಯ ಪ್ರಕಾರ, ನಿನ್ನೆ ಸಂಜೆ ನಂಜುಂಡಸ್ವಾಮಿ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಲು ತೆರಳಿದ್ದಾನೆ. ಈ ವೇಳೆ ಗಾಂಜಾ ಸೇವನೆಯಲ್ಲಿದ್ದ ಸ್ನೇಹಿತರ ನಡುವೆ ಮಾತಿನ ಚಕಮಕಿ ಉಂಟಾಗಿ, ಅದು ಗಲಾಟೆಗೆ ತಿರುಗಿದಂತೆ ತಿಳಿದುಬಂದಿದೆ. ಗಲಾಟೆ ತೀವ್ರಗೊಂಡು ಕೊನೆಗೆ ನಂಜುಂಡಸ್ವಾಮಿಯ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆ ಪೊಲೀಸರು ಒಬ್ಬ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.








